ಧರ್ಮೇಂದ್ರ ಪ್ರಧಾನ ರಾಜೀನಾಮೆ ಸತ್ಯಕ್ಕೆ ಸಂದ ಜಯ

ಧರ್ಮೇಂದ್ರ ಪ್ರಧಾನ ರಾಜೀನಾಮೆ ಸತ್ಯಕ್ಕೆ ಸಂದ ಜಯ

ಧರ್ಮೇಂದ್ರ ಪ್ರಧಾನ ರಾಜೀನಾಮೆ ಸತ್ಯಕ್ಕೆ ಸಂದ ಜಯ

ಕಲಬುರಗಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ನೀಡಿರುವುದು ಸತ್ಯಕ್ಕೆ ಸಿಕ್ಕ ಜಯ ಮತ್ತು ಬಿಜೆಪಿಯ ಅಹಂಕಾರಕ್ಕೆ ತಕ್ಕ ಪಾಠ ಎಂದು ಕಾಂಗ್ರೆಸ್ ಮುಖಂಡ ನಾಗರಾಜ ಗುಂಡಗುರ್ತಿ ಹೇಳಿದರು.

  ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು,ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ವಿದ್ಯಾರ್ಥಿಗಳ ಶಕ್ತಿ ಬಿಸಿ ಮುಟ್ಟಿಸಿದೆ. ವಿದ್ಯಾರ್ಥಿಗಳಿಗೆ ಬೆಂಬಲವಾಗಿ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್ ನಿಂತು ಸಂಸತ್‌ನಲ್ಲಿ ಹಾಗೂ ಬೀದಿಯಲ್ಲಿ ಗಟ್ಟಿಯಾಗಿ ಧ್ವನಿ ಎತ್ತಿದೆ ಎಂದು ತಿಳಿಸಿದ್ದಾರೆ.

        ‌ ‌‌‌‌ ‌‌ ನೀಟ್ ಪರೀಕ್ಷೆ ಅಕ್ರಮದ ಬಗ್ಗೆ ಹಾಗೂ 20 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಕಳೆದ 23 ದಿನಗಳಿಂದ ಹಲವಾರು ಜನ ಜಂತರ್ ಮಂತರ್ ಮೈದಾನದಲ್ಲಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು. ಇದಕ್ಕೆ ಕೇಂದ್ರದ ಬಿಜೆಪಿ ಸರ್ಕಾರ ಕ್ಯಾರೆ ಎಂದಿರಲಿಲ್ಲ.ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಕೆಲವೊಂದಿಷ್ಟು ಮುಖ್ಯ ವಾಹಿನಿಗಳಲ್ಲಿ ವಿದ್ಯಾರ್ಥಿ ಸಮೂಹವನ್ನು ಆತಂಕವಾದಿಗಳು, ಉಗ್ರವಾಗಿಗಳು ದೇಶದ್ರೋಹಿಗಳು ಎಂಬಂತೆ ಬಿಂಬಿಸಿದ್ದರು. ಅವರಿಗೆ ವಿದ್ಯಾರ್ಥಿ ಸಮೂಹ ಸರಿಯಾಗಿ ಪಾಠ ಕಲಿಸಿದೆ ಎಂದು ಹೇಳಿದ್ದಾರೆ.ಬಿಜೆಪಿಯವರಿಗೆ ನಾಚಿಕೆ ಇದ್ದರೆ ತಕ್ಷಣವೇ ಅಮಿತ್ ಶಾ ಕೂಡ ರಾಜೀನಾಮೆ ನೀಡಬೇಕು. ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ. ಇದಕ್ಕೆ ಗೃಹ ಸಚಿವರು ಹೊಣೆ ಹೊತ್ತುಕೊಳ್ಳಬೇಕು ಎಂದು ಅಗ್ರಹಿಸಿದ್ದಾರೆ.