ರಾಜ್ಯದ ರೈತರ, ಜನರ ಹಿತಾಸಕ್ತಿಗೆ ಧಕ್ಕೆಯಾದರೆ ಹೋರಾಟದ ಎಚ್ಚರಿಕೆ

ರಾಜ್ಯದ ರೈತರ, ಜನರ ಹಿತಾಸಕ್ತಿಗೆ ಧಕ್ಕೆಯಾದರೆ ಹೋರಾಟದ ಎಚ್ಚರಿಕೆ

ರಾಜ್ಯದ ರೈತರ, ಜನರ ಹಿತಾಸಕ್ತಿಗೆ ಧಕ್ಕೆಯಾದರೆ ಹೋರಾಟದ ಎಚ್ಚರಿಕೆ

ಯಡ್ರಾಮಿ:ಕರ್ನಾಟಕ ಹಾಗೂತಮಿಳು ನಾಡು ನಡುವಿನ ಕಾವೇರಿ ನದಿ ನೀರಿನ ಹಂಚಿಕೆ ವಿಚಾರದಲ್ಲಿ ರಾಜ್ಯದ ರೈತರು ಮತ್ತು ಜನರ ಹಿತಾಸಕ್ತಿಗೆ ಧಕ್ಕೆ ಆಗುತ್ತಿರುವುದರಿಂದ, ರಾಜ್ಯದ ರೈತರ ಹಿತ ಕಾಪಾಡದಿದ್ದರೆ ಹೋರಾಟ ಅನಿವಾರ್ಯ ಎಂದು ಜೈ ಕನ್ನಡಿಗರ ಸೇನೆಯ ಯಡ್ರಾಮಿ ತಾಲೂಕು ಅಧ್ಯಕ್ಷರಾದ ಭರತ್ ಎಂ ದೊರೆ ಹೇಳಿದರು.

 ಸರ್ಕಾರವು ತಕ್ಷಣ ಕ್ರಮ ಕೈಗೊಂಡು ರಾಜ್ಯಕ್ಕೆ ಅಗತ್ಯವಿರುವ ನೀರನ್ನು ಮೊದಲು ಉಳಿಸಿ ತಮಿಳುನಾಡಿಗೆ ನೀರು ಹರಿಸುವ ಕ್ರಮವನ್ನು ತಕ್ಷಣ ಸ್ಥಗಿತಗೊಳಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ರಾಜ್ಯ ಸರ್ಕಾರ ಈ ವಿಷಯದಲ್ಲಿ ತಕ್ಷಣ ಕ್ರಮ ಕೈಗೊಳ್ಳದೆ ಕರ್ನಾಟಕದ ರೈತರ ಹಾಗೂ ಸಾರ್ವಜನಿಕರ ಹಿತಾಸಕ್ತಿಯನ್ನು ರಕ್ಷಿಸಲು ವಿಫಲವಾದಲ್ಲಿ, ಜೈ ಕನ್ನಡಿಗರ ಸೇನೆಯ ಸಂಘಟನೆ ನೇತೃತ್ವದಲ್ಲಿ ರಾಜ್ಯವ್ಯಾಪಿ ಹೋರಾಟ ಹಮ್ಮಿಕೊಳ್ಳಲಾಗುತ್ತದೆ ಎಂದು ತಿಳಿಸಿದರು.

ಕನ್ನಡಿಗರ ಹಕ್ಕು, ರೈತರ ಹಿತ ಹಾಗೂ ರಾಜ್ಯದ ಜಲ ಸಂಪನ್ಮೂಲಗಳ ರಕ್ಷಣೆಯ ವಿಷಯದಲ್ಲಿ ಯಾವುದೇ ರಾಜಿ ಇಲ್ಲ. ಸರ್ಕಾರ ಜನರ ಭಾವನೆ ಗಳನ್ನು ಮನಗಂಡು ತಕ್ಷಣ ಸೂಕ್ತ ಕ್ರಮ ನಿರ್ಧಾರ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ವರದಿ ಜೆಟ್ಟೆಪ್ಪ ಎಸ್ ಪೂಜಾರಿ