ವೈದ್ಯರ ಸೇವೆ ಸಮಾಜಕ್ಕೆ ಅಮೂಲ್ಯ : ಡಾ. ರವೀಂದ್ರನಾಥ ಮೇಟಿ
ವೈದ್ಯರ ಸೇವೆ ಸಮಾಜಕ್ಕೆ ಅಮೂಲ್ಯ : ಡಾ. ರವೀಂದ್ರನಾಥ ಮೇಟಿ
ಕಲಬುರಗಿ : ಕರ್ನಾಟಕ ರಾಜ್ಯ ಸರಕಾರಿ ವೈದ್ಯಾಧಿಕಾರಿಗಳ ಸಂಘದ ವತಿಯಿಂದ ೨೦೨೬-೨೭ನೇ ಸಾಲಿನ ರಾಷ್ಟ್ರೀಯ ವೈದ್ಯರ ದಿನಾಚರಣೆವನ್ನು ನಗರದ ಸಾಯಿ ಮಂದಿರದ ಸಮೀಪದ ವಿ.ಎಲ್. ಪಾಟೀಲ್ ಕಲ್ಯಾಣ ಮಂಟಪದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮವನ್ನು ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯ ಸರಕಾರಿ ವೈದ್ಯಾಧಿಕಾರಿಗಳ ಸಂಘ (ಏಉಒಔಂ) ಹಾಗೂ ಬೆಂಗಳೂರು ಉಪನಿರ್ದೇಶಕರಾದ ಡಾ. ರವೀಂದ್ರನಾಥ ಮೇಟಿ ಉದ್ಘಾಟಿಸಿ ಮಾತನಾಡಿ, ವೈದ್ಯ ವೃತ್ತಿ ಕೇವಲ ಉದ್ಯೋಗವಲ್ಲ, ಅದು ಸಮಾಜ ಸೇವೆಯ ಮಹತ್ತರ ಜವಾಬ್ದಾರಿಯಾಗಿದೆ. ಸರ್ಕಾರಿ ವೈದ್ಯರು ಗ್ರಾಮೀಣ ಪ್ರದೇಶ ಸೇರಿದಂತೆ ಎಲ್ಲ ವರ್ಗದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡುವ ಮೂಲಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸುತ್ತಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಲಬುರಗಿ ವಿಭಾಗದ ವಿಭಾಗೀಯ ಉಪನಿರ್ದೇಶಕರು ಹಾಗೂ ಜಿಲ್ಲಾ ಅಧ್ಯಕ್ಷರಾದ ಡಾ. ಶರಣಬಸಪ್ಪ ಗಣಜಲಖೇಡ್ ವಹಿಸಿದ್ದರು. ಸಂಘದ ಸದಸ್ಯರ ಏಕತೆ, ವೈದ್ಯರ ವೃತ್ತಿಪರ ಬೆಳವಣಿಗೆ ಹಾಗೂ ಸಾರ್ವಜನಿಕ ಆರೋಗ್ಯ ಸೇವೆ ಇನ್ನಷ್ಟು ಪರಿಣಾಮಕಾರಿಯಾಗಲು ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕೆಂದು ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಕಲಬುರಗಿ ವಿಭಾಗೀಯ ಉಪಾಧ್ಯಕ್ಷರು ಹಾಗೂ ಜಿಲ್ಲಾ ಆಸ್ಪತ್ರೆಯ ಆರ್‌ಎಂಒ ಡಾ. ನಾಗರಾಜ ಪಾಟೀಲ ವಿಶೇಷ ಉಪಸ್ಥಿತರಿದ್ದರು.
ಮುಖ್ಯ ಅತಿಥಿಗಳಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ವಿಭಾಗೀಯ ಸಹ ನಿರ್ದೇಶಕರಾದ ಡಾ. ಶಂಕರಪ್ಪ, ಜಿಲ್ಲಾ ಗೌರವಾಧ್ಯಕ್ಷರು ಹಾಗೂ ವಿಭಾಗೀಯ ಉಪನಿರ್ದೇಶಕರಾದ ಡಾ. ಅಂಬಾರಾಯ ರುದ್ರವಾಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶರಣಬಸಪ್ಪ ಕ್ಯಾತನಾಳ, ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ರುಕಿಯಾ ಅಸ್ನಾ ರಬಾ ಹಾಗೂ ಹಿರಿಯ ಶಸ್ತ್ರಚಿಕಿತ್ಸಕರಾದ ಡಾ. ರಾಜಶೇಖರ ಮಾಲಿ ಉಪಸ್ಥಿತರಿದ್ದು ವೈದ್ಯರ ಸೇವೆಯನ್ನು ಶ್ಲಾಘಿಸಿದರು.
ವಿಶೇಷ ಆಹ್ವಾನಿತರಾಗಿ ರಾಜ್ಯ ಉಪಾಧ್ಯಕ್ಷ ಡಾ. ಮೋಹನ್, ವಿಭಾಗೀಯ ಜಂಟಿ ಕಾರ್ಯದರ್ಶಿ ಡಾ. ರುದ್ರಗೌಡ, ರಾಜ್ಯ ಜಂಟಿ ಕಾರ್ಯದರ್ಶಿ ಡಾ. ಸತೀಶ್, ಆಂತರಿಕ ಲೆಕ್ಕ ಪರಿಶೋಧಕಿ ಡಾ. ಶೋಭಾ ಟಿ.ಆರ್. ಹಾಗೂ ಸಂಘದ ವ್ಯವಸ್ಥಾಪಕ ಕೃಷ್ಣಪ್ಪ, ಶ್ರೀ ಆಸ್ಪತ್ರೆಯ ಡಾ. ಸಚಿನ್, ಡಾ. ಶ್ವೇತ, ವಿ ಎಲ್ ಪಾಟೀಲ್ ಆಸ್ಪತ್ರೆಯ ಡಾ. ರವೀಂದ್ರ ಪಾಟೀಲ್, ಸಂಜನಾ ಆಸ್ಪತ್ರೆಯ ಡಾ. ಅಂಬರಪ್ಪ ಜಂಪಾ, ಶಾರದಾಂಬೆ ಆಸ್ಪತ್ರೆಯ ಡಾ. ಗಿರೀಶ್ ಸ್ವಾಮಿ, ಡಾ ದೀಪ ಸ್ವಾಮಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ವೈದ್ಯರನ್ನು, ನಿವೃತ್ತ ವೈದ್ಯರನ್ನು, ವೈದ್ಯರ ಪ್ರತಿಭಾವಂತ ಮಕ್ಕಳನ್ನು ಹಾಗೂ ವಿವಿಧ ಕ್ರೀಡಾಕೂಟಗಳಲ್ಲಿ ವಿಜೇತರಾದ ವೈದ್ಯರನ್ನು ಸನ್ಮಾನಿಸಲಾಯಿತು. ನಂತರ ವೈದ್ಯರು ಮತ್ತು ಅವರ ಕುಟುಂಬದ ಸದಸ್ಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಮೂಲಕ ಸಮಾರಂಭಕ್ಕೆ ಮತ್ತಷ್ಟು ಮೆರುಗು ನೀಡಲಾಯಿತು.
ಕಾರ್ಯಕ್ರಮದ ಯಶಸ್ಸಿಗೆ ಕಲಬುರಗಿ ಶಾಖೆಯ ಉಪಾಧ್ಯಕ್ಷರಾದ ಡಾ. ವಿನೋದಕುಮಾರ ಎಸ್.ಹೆಚ್., ಡಾ. ಇರ್ಫಾನ್ ಅಲಿ, ಕಾರ್ಯದರ್ಶಿ ಡಾ. ಸಂತೋಷ ಆಲಗೂರ, ಖಜಾಂಚಿ ಡಾ. ದೀಪಕ್ ಕುಮಾರ ರಾಠೋಡ, ಜಂಟಿ ಕಾರ್ಯದರ್ಶಿಗಳಾದ ಡಾ. ಸಂಧ್ಯಾ ಕಾನೇಕರ್ ಹಾಗೂ ಡಾ. ಅಮೃತಾ ಕುಲಕರ್ಣಿ ಸೇರಿದಂತೆ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಶ್ರಮಿಸಿದರು.
ಕೊನೆಯಲ್ಲಿ ಎಲ್ಲಾ ವೈದ್ಯ ಮಿತ್ರರನ್ನು ಆತ್ಮೀಯವಾಗಿ ಸ್ವಾಗತಿಸಿ, ಸಮಾಜದ ಆರೋಗ್ಯ ರಕ್ಷಣೆಯಲ್ಲಿ ವೈದ್ಯರ ಸೇವೆ ಸದಾ ಸ್ಮರಣೀಯವಾಗಿರುತ್ತದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದರು.

