ಓದಿನ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತಯ್ಯಾರಿ ಅಗತ್ಯ. ಬಸವರಾಜ ಐನೋಳಿ

ಓದಿನ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳ  ತಯ್ಯಾರಿ ಅಗತ್ಯ.  ಬಸವರಾಜ ಐನೋಳಿ

ಓದಿನ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತಯ್ಯಾರಿ ಅಗತ್ಯ. ಬಸವರಾಜ ಐನೋಳಿ

     ಚಿಂಚೋಳಿ - ಕಾಲೇಜಿನ ವಿದ್ಯಾರ್ಥಿಗಳು ತಮ್ಮ ದೈನಂದಿನ ಓದು ಹಾಗೂ ಅಭ್ಯಾಸದ ಜೊತೆಗೆ ಬದುಕನ್ನು ರೂಪಿಸಿಕೊಳ್ಳುವುದಕ್ಕೆ, ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿ ಮಾಡಿಕೊಳ್ಳುವುದು ಬಹಳ ಅಗತ್ಯ. ಎಸ್ ಡಿ ಎ, ಎಫ್ ಡಿ ಎ, ಪೊಲೀಸ್, ಗ್ರಾಮ ಲೆಕ್ಕಾಧಿಕಾರಿ, ಸ್ಟಾಫ್ ಸೆಲೆಕ್ಷನ್ ಕಮಿಷನ್, ಕೆಪಿಎಸ್ಸಿ ಹಾಗೂ ಯುಪಿಎಸ್ಸಿಯಿಂದ ನಡೆಯುವ ಎಲ್ಲಾ ಪರೀಕ್ಷೆಗಳಿಗೆ ಪೂರ್ವ ತಯಾರಿ ಮಾಡಿಕೊಳ್ಳಬೇಕು. ದಿನಪತ್ರಿಕೆ, ವಾರಪತ್ರಿಕೆ, ಸ್ಪರ್ಧಾತ್ಮಕ ಪರೀಕ್ಷೆಗೆ ಮೀಸಲಾಗಿರುವ ಮಾಸ ಪತ್ರಿಕೆಗಳನ್ನು ಓದುವುದು ಹಾಗೂ ಗಣಕಯಂತ್ರದ ಜ್ಞಾನ ಪಡೆದುಕೊಳ್ಳುವುದು ಅತ್ಯಂತ ಅಗತ್ಯ; ಎಂದು ರಾಜ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ; ಶಿಕ್ಷಕ ಹಾಗೂ ಸಾಹಿತಿ ಬಸವರಾಜ ಐನೋಳಿ ಅಭಿಪ್ರಾಯ ಪಟ್ಟರು. ಅವರು ರವಿವಾರ ಇಲ್ಲಿನ ಚಂದಾಪುರದ ಹಾರಕೂಡ ಶ್ರೀ ಚನ್ನಬಸವೇಶ್ವರ ವಿಜ್ಞಾನ, ವಾಣಿಜ್ಯ ಹಾಗೂ ಕಲಾ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ ಶಿಕ್ಷಕರ ದಿನಾಚರಣೆ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗಾರಂಪಳ್ಳಿಯಲ್ಲಿ ಮುಖ್ಯ ಗುರುಗಳಾಗಿ ಸೇವೆ ಸಲ್ಲಿಸಿ, ವಯೋ ನಿವೃತ್ತಿ ಹೊಂದಿರುವ ಜಗನ್ನಾಥ ಕಟ್ಟಿಮನಿ ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದವರು; ಸಾಧನೆ ಮಾಡಬೇಕು ಎನ್ನುವ ವಿದ್ಯಾರ್ಥಿಗೆ ಬಡತನ, ಆರ್ಥಿಕ ಮುಗ್ಗಟ್ಟು ಮುಂತಾದ ಯಾವುದೇ ಸಮಸ್ಯೆಗಳು ಅಡಚಣೆಯಾಗುವುದಿಲ್ಲ ಎಂದು ನುಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ವಿಭಾಗದ 

ಆಡಳಿತಾಧಿಕಾರಿ ನಾಗರಾಜ ಕಲಬುರ್ಗಿ ವಹಿಸಿದ್ದರು. ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ಆಡಳಿತಾಧಿಕಾರಿ ಗೀತಾರಾಣಿ ಐನೋಳಿ, ಕಾಲೇಜು ಪ್ರಾಚಾರ್ಯರು ಬಸವರಾಜ ಪಡಶೆಟ್ಟಿ, ಪ್ರೌಢಶಾಲಾ ಮುಖ್ಯ ಗುರು ನೀಲಮ್ಮ ಮೋದಿನಪೂರ, ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರು ಮಲ್ಲಪ್ಪ ಕಾರ್ಪೆಂಟರ, ಮುಖ್ಯ ಅತಿಥಿಗಳಾಗಿದ್ದರು. ಇದೇ ಸಂದರ್ಭದಲ್ಲಿ ಚನ್ನಬಸಯ್ಯ ಮಠ ಸೇರಿದಂತೆ, ಶಿಕ್ಷಣ ಸಂಸ್ಥೆಯ ಉಪನ್ಯಾಸಕರು, ಶಿಕ್ಷಕ ವೃಂದದವರಿಗೆ ಸನ್ಮಾನಿಸಿ ಗೌರವಿಸಲಾಯಿತು. ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮೇಘನಾ ಸ್ವಾಗತಿಸಿದಳು. ಜಯಶ್ರೀ ಹಾಗೂ ಪ್ರಿಯಾಂಕ ನಿರೂಪಿಸಿದರು. ರಾಧಿಕಾ ಮತ್ತು ಸಂಗಡಿಗರು ಪ್ರಾರ್ಥನಾ ಗೀತೆ ಹಾಡಿದರು. ಪಾರ್ವತಿ ವoದಿಸಿದಳು.