ಡಾ. ಅಜಯ್ ಸಿಂಗ್ ಅವರಿಗೆ ಸಚಿವ ಸ್ಥಾನ ನೀಡಬೇಕು: ಆಕಾಶ್ ಟಿ. ಬಿಳವಾರ್ ಆಗ್ರಹ

ಡಾ. ಅಜಯ್ ಸಿಂಗ್ ಅವರಿಗೆ ಸಚಿವ ಸ್ಥಾನ ನೀಡಬೇಕು: ಆಕಾಶ್ ಟಿ. ಬಿಳವಾರ್ ಆಗ್ರಹ

ಡಾ. ಅಜಯ್ ಸಿಂಗ್ ಅವರಿಗೆ ಸಚಿವ ಸ್ಥಾನ ನೀಡಬೇಕು: ಆಕಾಶ್ ಟಿ. ಬಿಳವಾರ್ ಆಗ್ರಹ

ಕಲಬುರಗಿ, ಆ. 3: ಕೆಕೆಆರ್‌ಡಿಬಿ ಅಧ್ಯಕ್ಷರು ಹಾಗೂ ಯಡ್ರಾಮಿ–ಜೇವರ್ಗಿ ಕ್ಷೇತ್ರದ ಶಾಸಕರಾದ ಡಾ. ಅಜಯ್ ಸಿಂಗ್ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಆಕಾಶ್ ಟಿ. ಬಿಳವಾರ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಡಾ. ಅಜಯ್ ಸಿಂಗ್ ಅವರು ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಕ್ಷೇತ್ರದ ಅಭಿವೃದ್ಧಿಗೆ ಹಾಗೂ ಜನೋಪಯೋಗಿ ಕಾಮಗಾರಿಗಳಿಗೆ ವಿಶೇಷ ಒತ್ತು ನೀಡುತ್ತಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಜನರ ವಿಶ್ವಾಸ ಗಳಿಸಿರುವ ನಾಯಕರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಅವರ ರಾಜಕೀಯ ಅನುಭವ, ಜನಪರ ಸೇವೆ ಹಾಗೂ ಅಭಿವೃದ್ಧಿಪರ ಕಾರ್ಯಗಳನ್ನು ಪರಿಗಣಿಸಿ ರಾಜ್ಯ ಸಚಿವ ಸಂಪುಟದಲ್ಲಿ ಅವರಿಗೆ ಸೂಕ್ತ ಸ್ಥಾನಮಾನ ನೀಡಿ ಸಚಿವರಾಗಿ ಅವಕಾಶ ಕಲ್ಪಿಸಬೇಕು. ಇದರಿಂದ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಗಲಿದೆ ಎಂದು ಆಕಾಶ್ ಟಿ. ಬಿಳವಾರ್ ಅಭಿಪ್ರಾಯಪಟ್ಟಿದ್ದಾರೆ.

ಡಾ. ಅಜಯಸಿಂಗ್ ಅವರಿಗೆ ಸಚಿಸ್ಥಾನ ನೀಡಿದ ಮಾನ್ಯ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರಿಗೆ ಜೀವರಿಗೆ ಮತಕ್ಷೇತ್ರದ ಜನತೆಯ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳು

ವರದಿ: ಜೆಟ್ಟೆಪ್ಪ ಎಸ್. ಪೂಜಾರಿ