ವಾಲಿಬಾಲ್, ತ್ರೋಬಾಲ್‌ನಲ್ಲಿ ಕೆಂಭಾವಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳ ಸಾಧನೆ; ತಾಲೂಕು ಮಟ್ಟಕ್ಕೆ ಆಯ್ಕೆ

ಕೆಂಭಾವಿ, ಆ. 4: ಸುರಪುರ ತಾಲೂಕಿನ ಕೆಂಭಾವಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ.

ನಡೆದ ಕ್ರೀಡಾಕೂಟದಲ್ಲಿ ಶಾಲೆಯ ಪ್ರಾಥಮಿಕ ವಿಭಾಗದ ಬಾಲಕರ ವಾಲಿಬಾಲ್ ತಂಡ ಹಾಗೂ ಬಾಲಕಿಯರ ತ್ರೋಬಾಲ್ ತಂಡ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದಿವೆ.

ವೈಯಕ್ತಿಕ ಸ್ಪರ್ಧೆಗಳಲ್ಲಿಯೂ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಉದ್ದಜಿಗಿತದಲ್ಲಿ ನಂದೇಶ್ ಪ್ರಥಮ ಸ್ಥಾನ, 100 ಮೀಟರ್ ಓಟದಲ್ಲಿ ರೇವಣಸಿದ್ಧ ಪ್ರಥಮ ಸ್ಥಾನ, ಗುಂಡುಸೆತದಲ್ಲಿ ಈಶ್ವರಿ ಪ್ರಥಮ ಸ್ಥಾನ, ಎತ್ತರ ಜಿಗಿತದಲ್ಲಿ ಪ್ರವೀಣ್ ದ್ವಿತೀಯ ಸ್ಥಾನ ಹಾಗೂ 100 ಮೀಟರ್ ಮತ್ತು 200 ಮೀಟರ್ ಓಟಗಳಲ್ಲಿ ಶ್ರೇಯಾ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಮುಖ್ಯ ಪ್ರಾಂಶುಪಾಲರಾದ ಬಸಮ್ಮ ಪಾಟೀಲ್, ದೈಹಿಕ ಶಿಕ್ಷಣ ಶಿಕ್ಷಕರಾದ ಮಡಿವಾಳಪ್ಪ ಎಸ್. ಪಾಟೀಲ್ ಹಾಗೂ ಶಾಲೆಯ ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿ, ಮುಂದಿನ ಹಂತದ ಸ್ಪರ್ಧೆಗಳಲ್ಲಿ ಇನ್ನಷ್ಟು ಯಶಸ್ಸು ಸಾಧಿಸುವಂತೆ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ವರದಿ: ಜೆಟ್ಟೆಪ್ಪ ಎಸ್. ಪೂಜಾರಿ