ಬಸವೇಶ್ವರ ಆಸ್ಪತ್ರೇಯಲ್ಲಿ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯಡಿಯಲ್ಲಿ ವೈದ್ಯಕೀಯ ತಪಾಸಣಾ ಸೌಲಭ್ಯ
ಬಸವೇಶ್ವರ ಆಸ್ಪತ್ರೇಯಲ್ಲಿ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯಡಿಯಲ್ಲಿ ವೈದ್ಯಕೀಯ ತಪಾಸಣಾ ಸೌಲಭ್ಯ
ಕಲಬುರ್ಗಿ: 40 ವರ್ಷಮೀರಿದ ರಾಜ್ಯ ಸರ್ಕಾರಿ ನೌಕರರಿಗೆ ವಾರ್ಷಿಕ ವೈದ್ಯಕೀಯ ತಪಾಸಣೆ ಸೌಲಭ್ಯವನ್ನು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯಡಿಯಲ್ಲಿ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೇಯಲ್ಲಿ ಆಯೋಜಿಸಲಾಗಿದೆ.
ಆದ್ದರಿಂದ, ಎಲ್ಲಾ ಅರ್ಹ ಫಲಾನುಭವಿಗಳು ಈ ಸೌಲಭ್ಯದ ಸದುಪಯೋಗವನ್ನು ಪಡೆದುಕೊಂಡು, ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕೆಂದು ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ ನಮೋಶಿಯವರು ತಿಳಿಸಿದ್ದಾರೆ ಎಂದು ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಪತ್ರಿಕಾ ಮಾಧ್ಯಮದ ಪ್ರತಿನಿಧಿ ಐ ಕೆ ಪಾಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

