ಶಹಾಬಾದ್: ಹೋಬಳಿ ಮಟ್ಟದ ಕ್ರೀಡಾಕೂಟ – ಕಬಡ್ಡಿಯಲ್ಲಿ ಕೂಡಲ ಸಂಗಮ ಪ್ರೌಢ ಶಾಲೆಗೆ ಪ್ರಥಮ ಸ್ಥಾನ
ಶಹಾಬಾದ್: ಹೋಬಳಿ ಮಟ್ಟದ ಕ್ರೀಡಾಕೂಟ – ಕಬಡ್ಡಿಯಲ್ಲಿ ಕೂಡಲ ಸಂಗಮ ಪ್ರೌಢ ಶಾಲೆಗೆ ಪ್ರಥಮ ಸ್ಥಾನ
ಶಹಾಬಾದ್, ಆ. 5: ಹೋಬಳಿ ಮಟ್ಟದ ಕ್ರೀಡಾಕೂಟದ ಕಬಡ್ಡಿ ಸ್ಪರ್ಧೆಯಲ್ಲಿ ಶಹಾಬಾದ್ ನಗರದ ಕೂಡಲ ಸಂಗಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಮುಖ್ಯಗುರು ಅಪ್ಪಾಸಾಬ್ ಚೌದರಿ ಹರ್ಷ ವ್ಯಕ್ತಪಡಿಸಿ, ವಿದ್ಯಾರ್ಥಿಗಳ ಪರಿಶ್ರಮ, ದೈಹಿಕ ಶಿಕ್ಷಣ ಶಿಕ್ಷಕರ ಮಾರ್ಗದರ್ಶನ ಹಾಗೂ ಪಾಲಕರ ಸಹಕಾರವೇ ಈ ಯಶಸ್ಸಿಗೆ ಕಾರಣವಾಗಿದೆ ಎಂದು ಹೇಳಿದರು.
ವಿಜೇತ ವಿದ್ಯಾರ್ಥಿಗಳಿಗೆ ಶಾಲೆಯ ಶಿಕ್ಷಕರು, ಸಿಬ್ಬಂದಿ ಹಾಗೂ ಪಾಲಕರು ಅಭಿನಂದನೆ ಸಲ್ಲಿಸಿದ್ದು, ಮುಂದಿನ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲೂ ಉತ್ತಮ ಸಾಧನೆ ಮಾಡಿ ಶಾಲೆ ಮತ್ತು ಶಹಾಬಾದ್ ನಗರದ ಹೆಸರನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲಿ ಎಂದು ಶುಭ ಹಾರೈಸಿದರು.
ನಾಗರಾಜ್ ದಂಡಾವತಿ ವರದಿ

