ಎಸ್‌ಎಸ್‌ಎಲ್‌ಸಿಯಲ್ಲಿ 97% ಅಂಕ ಪಡೆದ ಬಸವಪ್ರಭು ಶಿವರಾಜ ಕಾಳಗಿಗೆ ಸನ್ಮಾನ

ಎಸ್‌ಎಸ್‌ಎಲ್‌ಸಿಯಲ್ಲಿ 97% ಅಂಕ ಪಡೆದ ಬಸವಪ್ರಭು ಶಿವರಾಜ ಕಾಳಗಿಗೆ ಸನ್ಮಾನ

ಎಸ್‌ಎಸ್‌ಎಲ್‌ಸಿಯಲ್ಲಿ 97% ಅಂಕ ಪಡೆದ ಬಸವಪ್ರಭು ಶಿವರಾಜ ಕಾಳಗಿಗೆ ಸನ್ಮಾನ

ಕಲಬುರಗಿ: ಶ್ರೀ ಶರಬಸವೇಶ್ವರ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ಮಿನಿ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.97 ಅಂಕಗಳನ್ನು ಗಳಿಸಿ ಅತ್ಯುತ್ತಮ ಸಾಧನೆ ಮಾಡಿದ ಬಸವಪ್ರಭು ಶಿವರಾಜ ಕಾಳಗಿ ಅವರನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ದಾಕ್ಷಯಣಿ ಎಸ್. ಅಪ್ಪ ಅವರು ಸನ್ಮಾನಿಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಯ ಶೈಕ್ಷಣಿಕ ಸಾಧನೆಯನ್ನು ಶ್ಲಾಘಿಸಿದ ಅವರು, ಇದೇ ರೀತಿಯ ಪರಿಶ್ರಮ ಮತ್ತು ಶಿಸ್ತಿನಿಂದ ಮುಂದಿನ ವಿದ್ಯಾಭ್ಯಾಸದಲ್ಲಿಯೂ ಉನ್ನತ ಸಾಧನೆ ಮಾಡಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಶ್ರೀ ಅಲ್ಲಮಪ್ರಭು ದೇಶಮುಖ ಉಪಸ್ಥಿತರಿದ್ದರು.