ವಿದ್ಯಾರ್ಥಿಗಳು ಕಷ್ಟಪಟ್ಟು ಓದುವುದಕ್ಕಿಂತ,ಇಷ್ಟಪಟ್ಟು ಓದಿ.- ಕನಕಪ್ಪ ವಾಗಣಗೇರಿ.
ವಿದ್ಯಾರ್ಥಿಗಳು ಕಷ್ಟಪಟ್ಟು ಓದುವುದಕ್ಕಿಂತ,ಇಷ್ಟಪಟ್ಟು ಓದಿ.- ಕನಕಪ್ಪ ವಾಗಣಗೇರಿ.
ಶಹಾಪುರ : ವಿದ್ಯಾರ್ಥಿಗಳು ಕಷ್ಟಪಟ್ಟು ಓದುವುದಕ್ಕಿಂತ ಇಷ್ಟಪಟ್ಟು ಓದುವುದರ ಜೊತೆಗೆ ಜ್ಞಾನದ ಆಳಕ್ಕಿಳಿದು,ನಿರಂತರವಾಗಿ ಅಧ್ಯಯನಶೀಲರಾದಾಗ ಮಾತ್ರ
ಸಾಧನೆಯ ಗುರಿ ತಲುಪಲು ಸಾಧ್ಯ ಎಂದು ಸಾಹಿತಿಗಳಾದ ಕನಕಪ್ಪ ವಾಗಣಗೇರಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ತಾಲ್ಲೂಕಿನ ಸಗರ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜರುಗಿದ ಪ್ರಥಮ ವರ್ಷದ ಪಿಯು ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು ಪ್ರತಿಯೊಬ್ಬ ವಿದ್ಯಾರ್ಥಿ ಅಭ್ಯಾಸದ ಜೊತೆಗೆ ಗುರು ಹಿರಿಯರಿಗೆ ಗೌರವ ಕೊಡುವ ಸಂಸ್ಕಾರ ಬೆಳೆಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಅಂಬ್ಲಯ್ಯ ಸೈದಾಪುರ ಮಾತನಾಡದ ಅವರು ವಿದ್ಯಾರ್ಥಿಗಳು ಇಲ್ಲಿನ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ಶಿಕ್ಷಣ ಪಡೆಯುವುದರ ಜೊತೆಗೆ ಈಗ ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಹೇಳಿದರು.ಇಲ್ಲಿ ಶಿಕ್ಷಣ,ಶಿಸ್ತು,ಸಮಯ ಪಾಲನೆಗೆ ಅತಿ ಒತ್ತು ನೀಡಲಾಗುತ್ತಿದ್ದು,ಕಾಲೇಜಿನ ಪ್ರತಿಯೊಬ್ಬ ವಿದ್ಯಾರ್ಥಿಗಳು ಇದನ್ನು ಪಾಲಿಸಬೇಕೆಂದು ನುಡಿದರು,ಈ ಸಂದರ್ಭದಲ್ಲಿ ಕಳೆದ ಬಾರಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಸತ್ಕರಿಸಲಾಯಿತು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಎಸ್.ಡಿ.ಎಂ.ಸಿ ಉಪಾದ್ಯಕ್ಷರಾದ ಸಂಗಣ್ಣ ಕೊಬ್ರಿ,ಅತಿಥಿಗಳಾಗಿ ಕರ್ನಾಟಕ ಪಬ್ಲಿಕ್ ಶಾಲೆಯ ಉಪ ಪ್ರಾಂಶುಪಾಲರಾದ ವಿಶ್ವನಾಥ ಯರಗೋಳ,ಎಸ್.ಡಿ.ಎಂ.ಸಿ.ಸದಸ್ಯರಾದ ಮನೋಹರ ಆಚಾರ್ಯ,ಕಾಲೇಜಿನ ಉಪನ್ಯಾಸಕ ವೃಂದದವರು ಸೇರಿದಂತೆ ಇತರರು ಉಪಸ್ಥಿತರಿದ್ದರು.

