ಭೋವಿ-ವಡ್ಡರ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಭೋವಿ-ವಡ್ಡರ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಭೋವಿ-ವಡ್ಡರ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಕಲಬುರಗಿ: ಶ್ರೀ ಸಿದ್ಧರಾಮೇಶ್ವರ ಸರ್ಕಾರಿ, ಅರೆ-ಸರ್ಕಾರಿ ಮತ್ತು ನಿವೃತ್ತ ನೌಕರರ ಸಂಘ (ರಿ.) ಕಲಬುರಗಿ ವತಿಯಿಂದ ಭೋವಿ-ವಡ್ಡರ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಅರ್ಜಿ ಆಹ್ವಾನಿಸಲಾಗಿದೆ.

2025-26ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಸ್ನಾತಕ, ಸ್ನಾತಕೋತ್ತರ, ಡಿಪ್ಲೊಮಾ ಹಾಗೂ ಇತರೆ ಪರೀಕ್ಷೆಗಳಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದು, ಪ್ರಥಮ ಬಾರಿಗೆ ಪರೀಕ್ಷೆಯಲ್ಲಿ ಪಾಸಾದ ಪ್ರತಿಭಾವಂತ ಭೋವಿ-ವಡ್ಡರ ಸಮಾಜದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಡಾ. ಶರಣಪ್ಪ ಗುಂಡಗುರ್ತಿ ತಿಳಿಸಿದ್ದಾರೆ.

ಅರ್ಹ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಅಂಕಪಟ್ಟಿ ಶಾಲೆಯಿಂದ ದೃಢಪಡಿಸಿದ್ದು , ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಎರಡು ಭಾವಚಿತ್ರಗಳು ಹಾಗೂ ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 30, 2026ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಸಂಘ ತಿಳಿಸಿದೆ.

ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಭೀಮಯ್ಯ ದಂಡಗುಲ್ಕರ್  — ಮೊ. 6360180307** ಹಾಗೂ ಗುಂಡಪ್ಪ ಗೊಟೆಕರ್ — ಮೊ. 8971234164 ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.