ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪಿಗಳಿಗೆ ಕಠಿಣ ಶಿಕ್ಷೆ ಒದಗಿಸಬೇಕೆಂದು ಪದ್ಮಿನಿ ಕಿರಣಗಿ ಒತ್ತಾಯ

ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪಿಗಳಿಗೆ ಕಠಿಣ ಶಿಕ್ಷೆ  ಒದಗಿಸಬೇಕೆಂದು ಪದ್ಮಿನಿ ಕಿರಣಗಿ ಒತ್ತಾಯ

 ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪಿಗಳಿಗೆ ಕಠಿಣ ಶಿಕ್ಷೆ ಒದಗಿಸಬೇಕೆಂದು ಪದ್ಮಿನಿ ಕಿರಣಗಿ ಒತ್ತಾಯ

ಕಲಬುರಗಿ: ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಜಿಲ್ಲಾ ಸಮಿತಿ ವತಿಯಿಂದ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗುಂಡೂರು ಗ್ರಾಮದ ಬಡ ಕುಟುಂಬದ ಅತಿ ಹಿಂದುಳಿದ ಪಂಗಡದ ಯುವತಿಯ ಅತ್ಯಾಚಾರ ಮಾಡಿ ಬರ್ಬರವಾಗಿ ಹತ್ತೆಗೈಯ್ದುದ್ದನ್ನು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ತೀವ್ರವಾಗಿ ಖಂಡಿಸುತ್ತದೆ.  

ರಾಜ್ಯದಲ್ಲಿ ಈ ರೀತಿ ಪ್ರತಿದಿನ ಇಂತಹ ಘಟನೆಗಳು ಸಾಲು ಸಾಲಾಗಿ ನಡೆಯುತ್ತಲೇ ಇವೆ. ಈ ಕಾಮುಕರ ಕ್ರೌರ್ಯಕ್ಕೆ ಕಡಿವಾಣ ಯಾವಾಗ? ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ನೀಡಿ ಪ್ರಕರಣಗಳು ಮರುಕಳಿಸದಂತೆ ಸರಕಾರ ಕಠಿಣ ಕ್ರಮ ಅಥವಾ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಬೇಕು. ಅಮಾಯಕ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪಿಗಳಿಗೆ ಕಠಿಣ ಶಿಕ್ಷೆ ಒದಗಿಸಬೇಕೆಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಜಿಲ್ಲಾ ಶಾಖೆ ಒತ್ತಾಯಿಸುತ್ತದೆ.

ಮಗಳನ್ನು ಕಳೆದುಕೊಂಡ ಆ ಬಡ ಕುಟುಂಬಕ್ಕೆ ನ್ಯಾಯ ಸಿಗಬೇಕು. ಆ ಬಡ ಕುಟುಂಬ ಸೆಡ್ ನಲ್ಲಿ ಬದುಕು ಮಾಡುತ್ತಿದೆ. ಸರ್ಕಾರದಿಂದ ಅವರಿಗೆ ಒಂದು ಮನೆ ನಿರ್ಮಿಸಿ ಕೊಡಬೇಕು ಮತ್ತು ರಕ್ಷಣೆ ಒದಗಿಸಬೇಕು ಎಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪದ್ಮಿನಿ ಕಿರಣಗಿ ಅವರು ಪ್ರಕಟಣೆ ಮೂಲಕ ಒತ್ತಾಯಿಸಿದ್ದಾರೆ.