ಕಲಬುರ್ಗಿ ಜಿಲ್ಲೆಯ ಅನುದಾನಿತ ಉಪನ್ಯಾಸಕರಿಗೆ ಆರೋಗ್ಯ ಭಾಗ್ಯ ಯೋಜನೆ ಘೋಷಣೆ ಮಾಡಿದ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ

ಕಲಬುರ್ಗಿ ಜಿಲ್ಲೆಯ ಅನುದಾನಿತ ಉಪನ್ಯಾಸಕರಿಗೆ ಆರೋಗ್ಯ ಭಾಗ್ಯ ಯೋಜನೆ ಘೋಷಣೆ ಮಾಡಿದ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ

ಕಲಬುರ್ಗಿ ಜಿಲ್ಲೆಯ ಅನುದಾನಿತ ಉಪನ್ಯಾಸಕರಿಗೆ ಆರೋಗ್ಯ ಭಾಗ್ಯ ಯೋಜನೆ ಘೋಷಣೆ ಮಾಡಿದ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ

ಕಲಬುರ್ಗಿ: ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (KASS) ಅಡಿಯಲ್ಲಿ 40 ವರ್ಷ ಮೇಲ್ಪಟ್ಟ ರಾಜ್ಯ ಸರ್ಕಾರಿ ನೌಕರರಿಗಾಗಿ ವಾರ್ಷಿಕ ವೈದ್ಯಕೀಯ ತಪಾಸಣಾ ಶಿಬಿರವನ್ನು ಈಗಾಗಲೇ ಸರ್ಕಾರ ಘೋಷಣೆ ಮಾಡಿದೆ. ಕಲಬುರ್ಗಿ ಜಿಲ್ಲೆಯ ಸರ್ಕಾರಿ ನೌಕರರಿಗೆ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಆಸ್ಪತ್ರೆಯಲ್ಲಿ ಈ ಯೋಜನೆ ಜಾರಿ ಮಾಡಲಾಗಿದೆ.

ಇದು ಸರ್ಕಾರಿ ನೌಕಕರಿಗೆ ಮಾತ್ರ ಈ ಯೋಜನೆ ಇದ್ದು ಅನುದಾನಿತ ನೌಕರರಿಗೆ ಇಂತಹ ಯಾವುದೆ ಯೋಜನೆಗಳು ಇಲ್ಲ ಆದ್ದರಿಂದ ಕಲಬುರ್ಗಿ ಜಿಲ್ಲಾ ಅನುದಾನಿತ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಹಿತರಕ್ಷಣಾ ವೇದಿಕೆಯ ಉಪನ್ಯಾಸಕ ಐ ಕೆ ಪಾಟೀಲ್ ಅನುದಾನಿತ ನೌಕರರಿಗೂ ಇಂತಹ ಯೋಜನೆಗಳನ್ನು ಜಾರಿ ಮಾಡಲು ಸರ್ಕಾರದ ಮೇಲೆ ಒತ್ತಡ ಹೇರಬೇಕೆಂದು ಮನವಿ ಸಲ್ಲಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿಯವರು ತಮ್ಮ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಲಬುರ್ಗಿ ಜಿಲ್ಲೆಯ ಅನುದಾನಿತ ನೌಕರರಿಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳುವದಾಗಿ ಇಂದು ನಡೆದ ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಕಾರ್ಯಕ್ರಮದಲ್ಲಿ ಘೋಷಣೆ ಮಾಡಿದರು.

ಇಂತಹ ಆರೋಗ್ಯ ಭಾಗ್ಯ ಯೋಜನೆಯನ್ನು ಅನುದಾನಿತ ನೌಕರರಿಗೆ ವೈಯಕ್ತಿವಾಗಿ ಜಾರಿ ಮಾಡಿದ ರಾಜ್ಯದ ಏಕೈಕ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿಯವರಾಗಿದ್ದು ಅವರ ಈ ಉತ್ತಮ ಕಾರ್ಯಕ್ಕೆ ಅನುದಾನಿತ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಶಿವರಾಜ ನಂದಗಾಂವ, ಚಂದ್ರಶೇಖರ್ ಪಟ್ಟಣಕರ್, ವೀರಣ್ಣ ಪಟ್ಟಣ ,ಆನಂದ ಕೊಪ್ಪದ, ಶಶೀಕಾಂತ ನಾಗೂರ ಹರ್ಷ ವ್ಯಕ್ತಪಡಿಸಿ ಧನ್ಯವಾದಗಳನ್ನು ತಿಳಿಸಿದ್ದಾರೆ