ಔರಾದ್‌ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಬೆಳೆ ಪರಿಶೀಲನೆ
ಔರಾದ್‌ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಬೆಳೆ ಪರಿಶೀಲನೆ
ಕಲಬುರಗಿ : ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಇಂದು ಔರಾದ್ (ಬಿ) ಗ್ರಾಮದ ವ್ಯಾಪ್ತಿಯಲ್ಲಿ ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆಗಳ ಪರಿಶೀಲನೆ ನಡೆಸಿದರು.
ಜಮೀನಿನಲ್ಲಿ ಬೆಳೆದಿರುವ ಬೆಳೆಗಳ ಸ್ಥಿತಿಗತಿ, ಮಳೆ ಪ್ರಮಾಣ ಹಾಗೂ ಕೃಷಿ ಚಟುವಟಿಕೆಗಳ ಕುರಿತು ರೈತರಿಂದ ಮಾಹಿತಿ ಪಡೆದುಕೊಂಡರು. ಬೆಳೆಗಳ ಬೆಳವಣಿಗೆ ಹಾಗೂ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಚಿವರು ಪರಿಶೀಲಿಸಿದರು.
ರೈತರೊಂದಿಗೆ ಸಮಾಲೋಚನೆ ನಡೆಸಿದ ಸಚಿವರು, ಕೃಷಿ ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ರೈತರು ಉಪಸ್ಥಿತರಿದ್ದರು.
ವರದಿ: ಮುರುಗೇಶ್ ಇಟಗಿ

