ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಕಲಬುರಗಿ: ನಗರದ ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತ)ದಲ್ಲಿ 2026-27ನೇ ಸಾಲಿನ ವಿವಿಧ ಸ್ನಾತಕೋತ್ತರ ಕೋರ್ಸ್‌ಗಳ ಪ್ರಥಮ ಸೆಮಿಸ್ಟರ್ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ.

ಕಲಾ, ವಾಣಿಜ್ಯ, ಸಮಾಜ ವಿಜ್ಞಾನ ಹಾಗೂ ವಿಜ್ಞಾನ ನಿಕಾಯಗಳ ವಿವಿಧ ಸ್ನಾತಕೋತ್ತರ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಆಸಕ್ತ ವಿದ್ಯಾರ್ಥಿಗಳು ಆಗಸ್ಟ್ 26, 2026ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯ ಪ್ರತಿಯನ್ನು ಅಗತ್ಯ ದಾಖಲೆಗಳೊಂದಿಗೆ ಕಾಲೇಜು ಕಚೇರಿಗೆ ಸಲ್ಲಿಸಲು ಆಗಸ್ಟ್ 31, 2026 ಕೊನೆಯ ದಿನವಾಗಿದೆ.

ಪ್ರವೇಶಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ವೆಬ್‌ಸೈಟ್ www.gcak.ac.inಗೆ ಭೇಟಿ ನೀಡುವಂತೆ ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಇಂದುಮತಿ ಪಾಟೀಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.