ಬಿಜೆಪಿ ಗ್ರಾಮಾಂತರ ಜಿಲ್ಲಾ ರೈತ ಮೋರ್ಚಾ ಖಜಾಂಚಿಯಾಗಿ ಮಲ್ಲಿನಾಥ ಪಾಟೀಲ ಕಾಳಗಿ ನೇಮಕ

ಬಿಜೆಪಿ ಗ್ರಾಮಾಂತರ ಜಿಲ್ಲಾ ರೈತ ಮೋರ್ಚಾ ಖಜಾಂಚಿಯಾಗಿ ಮಲ್ಲಿನಾಥ ಪಾಟೀಲ ಕಾಳಗಿ ನೇಮಕ

ಬಿಜೆಪಿ ಗ್ರಾಮಾಂತರ ಜಿಲ್ಲಾ ರೈತ ಮೋರ್ಚಾ ಖಜಾಂಚಿಯಾಗಿ ಮಲ್ಲಿನಾಥ ಪಾಟೀಲ ಕಾಳಗಿ ನೇಮಕ

ಕಲಬುರಗಿ: ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಕಲಬುರಗಿ ಗ್ರಾಮಾಂತರ ಜಿಲ್ಲಾ ರೈತ ಮೋರ್ಚಾದ ಖಜಾಂಚಿಯಾಗಿ ಮಲ್ಲಿನಾಥ ಪಾಟೀಲ ಕಾಳಗಿ ಅವರನ್ನು ನೇಮಕ ಮಾಡಲಾಗಿದೆ.

ಬಿಜೆಪಿ ಕಲಬುರಗಿ ಗ್ರಾಮಾಂತರ ಜಿಲ್ಲಾಧ್ಯಕ್ಷರ ಆದೇಶದ ಮೇರೆಗೆ ಈ ನೇಮಕ ಮಾಡಲಾಗಿದ್ದು, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಬಸವರಾಜ ಮಾಲೀಪಾಟೀಲ ಕಮಲಾಪೂರ ಅವರು ನೇಮಕಾತಿ ಆದೇಶ ಹೊರಡಿಸಿದ್ದಾರೆ.

ಪಕ್ಷದ ತತ್ವ-ಸಿದ್ಧಾಂತಗಳಿಗೆ ಬದ್ಧರಾಗಿ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುವಂತೆ ಹಾಗೂ ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಮತ್ತಷ್ಟು ಬಲಪಡಿಸಿ, ಮುಂಬರುವ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ಮೂಲಕ ಪಕ್ಷದ ವರ್ಚಸ್ಸು ಹೆಚ್ಚಿಸಲು ಶ್ರಮಿಸುವಂತೆ ಬಸವರಾಜ ಮಾಲೀಪಾಟೀಲ ಕಮಲಾಪೂರ ಅವರು ಮಲ್ಲಿನಾಥ ಪಾಟೀಲ ಕಾಳಗಿ ಅವರಿಗೆ ಶುಭ ಹಾರೈಸಿದ್ದಾರೆ.

ಈ ಸಂದರ್ಭದಲ್ಲಿ ಬಸವರಾಜ್ ಕುಕುನೂರ್, ಷಣ್ಮುಖ, ಶಿಬರ್ ಬಂಡಿ, ಮಲ್ಲಣ್ಣ ಕುಲಕರ್ಣಿ ಸುರೇಶ್ ರಾಥೋಡ್ ಉಪಸ್ಥಿತರಿದ್ದರು.