ವಿ ಪ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಬಗ್ಗೆ ಅವಮಾನಕರ ಹೇಳಿಕೆ ಖಂಡಿಸಿ ಸಚಿವ ಎಂ ಬಿ ಪಾಟೀಲ್ ರಾಜೀನಾಮೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ
ವಿ ಪ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಬಗ್ಗೆ ಅವಮಾನಕರ ಹೇಳಿಕೆ ಖಂಡಿಸಿ ಸಚಿವ ಎಂ ಬಿ ಪಾಟೀಲ್ ರಾಜೀನಾಮೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ
ಕಲಬುರಗಿ : ಸೆಪ್ಟೆಂಬರ್ ೦೮,ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರು ಹಾಗೂ ಹಿರಿಯ ಬಿಜೆಪಿ ಮುಖಂಡರಾಗಿರುವ ಛಲವಾದಿ ನಾರಾಯಣಸ್ವಾಮಿ ಅವರ ಕುರಿತು ಹಗುರವಾಗಿ ಹಾಗೂ ಅವಹೇಳನಕಾರಿಯಾಗಿ ಮಾತನಾಡಿರುವ ರಾಜ್ಯ ಸಚಿವರಾಗಿರುವ ಎಂ ಬಿ ಪಾಟೀಲ್ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು.
ಒಬ್ಬ ದಲಿತ ನಾಯಕನ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ಎಂ ಬಿ ಪಾಟೀಲರ ಮೇಲೆ ದಲಿತ ದೌರ್ಜನ್ಯ ಪ್ರಕರಣದಡಿಯಲ್ಲಿ ಕೇಸ್ ದಾಖಲಿಸಲು ಆಗ್ರಹಿಸಿ ಕಲ್ಬುರ್ಗಿಯ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಗುವುದು. ದಿನಾಂಕ 10 -09-2024 ರಂದು ಬೆಳಗ್ಗೆ 10 ಗಂಟೆ 30 ನಿಮಿಷಕ್ಕೆ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತದಿಂದ ಜಿಲ್ಲಾಧಿಕಾರಿಗಳ ಕಚೇರಿ ಅವರಿಗೆ ಜಿಲ್ಲೆಯ ಬಿಜೆಪಿ ಶಾಸಕರು ವಿಧಾನ ಪರಿಷತ್ ಸದಸ್ಯರು ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷರು ಹಾಗೂ ಗ್ರಾಮಾಂತರ ಬಿಜೆಪಿ ಜಿಲ್ಲಾಧ್ಯಕ್ಷರು ಮಾಜಿ ಶಾಸಕರು , ಸ್ಥಳೀಯ ಜನಪ್ರತಿನಿಧಿಗಳು ಮಾಜಿ ಜನಪ್ರತಿನಿಧಿಗಳು, ಬಿಜೆಪಿ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ದಲಿತ ಪರ ಕಾಳಜಿಯುಳ್ಳ ಎಲ್ಲರೂ ಈ ಪ್ರತಿಭಟನೆಯಲ್ಲಿ ಭಾಗವಹಿಸಲು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ಡಾ ಅಂಬಾರಾಯ ಅಷ್ಠಗಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಬಸವರಾಜ್ ಬೆಣ್ಣುರ, ಬಿಜೆಪಿಯ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಮರೆಪ್ಪ ಬಡಿಗೇರ್, ಬಿಜೆಪಿ ಎಸ್ಸಿ ಮೋರ್ಚಾ ಮಹಾನಗರ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ತಾರಫೈಲ, ಧರ್ಮಣ್ಣ ಇಟಗಾ, ಎಸ್ ಜಿ ಭಾರತಿ , ಬಿಜೆಪಿ ಮಹಾನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ವಾಡೆಕರ್, ಮಾಜಿ ಮೇಯರ್ ವಿಶಾಲ್ ದರ್ಗಿ ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ಗಣೇಶ್ ವಳಕೇರಿ, ಬಿಜೆಪಿ ಮಹಾನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಯೋಗಿ ನಾಗನಹಳ್ಳಿ, ಪ್ರಮುಖರಾದ ಅಂಬಾರಾಯ ಬೆಳಕೋಟಾ, ಸಂತೋಷ ಹಾದಿಮನಿ,ಅಂಬಾರಾಯ ಚಲಗೇರಾ,ಸೇರಿದಂತೆ ಬಿಜೆಪಿ ಪ್ರಮುಖರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.