ಪತ್ರಕರ್ತರು ಸತ್ಯದ ಪರ ನಿಂತಾಗ ಮಾತ್ರ ಸಮಾಜಕ್ಕೆ ನ್ಯಾಯ ನೆಲಮಂಗಲದಲ್ಲಿ ಕಾನಿಪ ಧ್ವನಿ ಸಂಘಟನೆಯ 4ನೇ ರಾಜ್ಯ ಸಮ್ಮೇಳನ ವೈಭವದ ಉದ್ಘಾಟನೆ
ಪತ್ರಕರ್ತರು ಸತ್ಯದ ಪರ ನಿಂತಾಗ ಮಾತ್ರ ಸಮಾಜಕ್ಕೆ ನ್ಯಾಯ ನೆಲಮಂಗಲದಲ್ಲಿ ಕಾನಿಪ ಧ್ವನಿ ಸಂಘಟನೆಯ 4ನೇ ರಾಜ್ಯ ಸಮ್ಮೇಳನ ವೈಭವದ ಉದ್ಘಾಟನೆ
ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ್ ಹಾಗೂ ರಾಜ್ಯ ಉಪಾಧ್ಯಕ್ಷ ಎಸ್ ಎಸ್ ಪಾಟೀಲ ಅವರ ನೇತೃತ್ವದಲ್ಲಿ ಕ್ರಾಂತಿಕಾರಿ ಹೆಜ್ಜೆ
ನೆಲಮಂಗಲ:ಆ 10
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ 4ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಚಾರಿಟಬಲ್ ಟ್ರಸ್ಟ್ ಉದ್ಘಾಟನೆ ಹಾಗೂ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಪುಷ್ಪ ಬೈರೇಗೌಡ ಕನ್ವೆನ್ಷನ್ ಹಾಲ್‌ನಲ್ಲಿ ಅತ್ಯಂತ ವಿಜೃಂಭಣೆ ಮತ್ತು ಸಂಭ್ರಮದಿಂದ ನೆರವೇರಿತು.
ಸಂಘಟನೆಯ ರಾಜ್ಯಾಧ್ಯಕ್ಷರಾದ ಶ್ರೀ ಬಂಗ್ಲೆ ಮಲ್ಲಿಕಾರ್ಜುನ್ ಅವರು ಪ್ರಸ್ತವಿಕವಾಗಿ ಮಾತನಾಡಿದ ಅವರು ಪತ್ರಕರ್ತರ ಹಕ್ಕುಗಳು ಹಾಗೂ ಅವರ ಶ್ರೇಯೋಭಿವೃದ್ಧಿಗಾಗಿ ಸಂಘಟನೆ ನಡೆಸುತ್ತಿರುವ ನಿರಂತರ ಹೋರಾಟದ ಹಾದಿಯನ್ನು ಸ್ಪಷ್ಟಪಡಿಸಿದರು.ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯ ಪತ್ರಕರ್ತರ ರಕ್ಷಣಾ ಕಾಯ್ದೆ ಅನುಷ್ಠಾನ ಹಾಗೂ ಗ್ರಾಮೀಣ ಭಾಗದ ವರದಿಗಾರರ ಕ್ಷೇಮಾಭಿವೃದ್ಧಿಗೆ ಕಾನಿಪ ಧ್ವನಿ ಸಂಘಟನೆಯು ಕಾನೂನುಬದ್ಧವಾಗಿ ಕ್ರಾಂತಿಕಾರಿ ಹೋರಾಟ ರೂಪಿಸಿದೆ ಎಂದು ಅವರು ಪ್ರತಿಪಾದಿಸಿದರು.
ಅಂತೆಯೇ ಸಂಘಟನೆಯನ್ನು ರಾಜ್ಯಾದ್ಯಂತ ಗಟ್ಟಿಯಾಗಿ ಸಂಘಟಿಸುವಲ್ಲಿ ಮತ್ತು ಈ ಬೃಹತ್ ಸಮ್ಮೇಳನದ ಯಶಸ್ಸಿನಲ್ಲಿ ರಾಜ್ಯ ಉಪಾಧ್ಯಕ್ಷರಾದ ಶ್ರೀ ಡಾ//ಎಸ್ ಎಸ್ ಪಾಟೀಲ ಅವರ ಶ್ರಮ ಹಾಗೂ ಸಕ್ರಿಯ ನಾಯಕತ್ವ ಪ್ರಮುಖ ಪಾತ್ರ ವಹಿಸಿತು. ರಾಜ್ಯ ಮತ್ತು ಜಿಲ್ಲಾ ಘಟಕಗಳನ್ನು ಒಗ್ಗೂಡಿಸಿ ಪತ್ರಕರ್ತರ ನ್ಯಾಯಯುತ ಹಕ್ಕುಗಳಿಗಾಗಿ ಧ್ವನಿ ಎತ್ತುವಲ್ಲಿ ರಾಜ್ಯ ನಾಯಕರ ಕೊಡುಗೆಯನ್ನು ವೇದಿಕೆಯಲ್ಲಿದ್ದ ಗಣ್ಯರು ಶ್ಲಾಘಿಸಿದರು.
ದಿವ್ಯ ಸಾನಿಧ್ಯ ಮತ್ತು ದೀಪ ಬೆಳಗಿಸುವಿಕೆ
ಶಿವಾನಂದಾಶ್ರಮದ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ರಮಾನಂದನಾಥ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಸಾಂಪ್ರದಾಯಿಕ ಉದ್ಘಾಟನೆ ನೆರವೇರಿಸಿದರು.
ಆಶೀರ್ವಚನ ನೀಡಿದ ಶ್ರೀ ಶ್ರೀ ಶ್ರೀ ರಮಾನಂದನಾಥ ಮಹಾಸ್ವಾಮಿಗಳು ಬಸವಣ್ಣನವರ ಕಳಬೇಡ ಕೊಲಬೇಡ ಹುಸಿಯ ನುಡಿಯಲು ಬೇಡ ಎಂಬ ಸಪ್ತ ಸೂತ್ರಗಳು ಇಂದಿನ ಸಂವಿಧಾನ ಹಾಗೂ ಕಾನೂನಿನ ಮೌಲ್ಯಗಳಿಗೆ ಸಮಾನವಾಗಿವೆ. ಪತ್ರಕರ್ತರು ಸಮಾಜದ ಕಣ್ಣುಗಳಾಗಿ ವಾಕ್ ಸ್ವಾತಂತ್ರ್ಯವನ್ನು ಜವಾಬ್ದಾರಿಯುತವಾಗಿ ಬಳಸಿಕೊಂಡು ಸತ್ಯದ ಪರವಾಗಿ ನಿಲ್ಲಬೇಕು ಎಂದು ಮಾರ್ಗದರ್ಶನ ಮಾಡಿದರು.
ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಡಿಜಿಟಲ್ ಮತ್ತು AI ಯುಗದಲ್ಲೂ ಮುದ್ರಣ ಮಾಧ್ಯಮದ ವರದಿಗಳೇ ಇತಿಹಾಸದಲ್ಲಿ ಶಾಶ್ವತ ಸಾಕ್ಷಿ ಆಧಾರಿತ ದಾಖಲೆಯಾಗಿ ಉಳಿಯುತ್ತವೆ.ಶೋಷಿತರು ಹಾಗೂ ರೈತರ ಧ್ವನಿಯಾಗುವ ಪತ್ರಕರ್ತರಿಗೆ ರಕ್ಷಣೆ ನೀಡುವುದು ಸರ್ಕಾರದ ಕರ್ತವ್ಯ. ಯಾವುದೇ ಅಂಜಿಕೆ ಇಲ್ಲದೆ ನಿಷ್ಪಕ್ಷಪಾತವಾಗಿ ವರದಿಗಾರಿಕೆ ಮಾಡಿ ನಿಮ್ಮ ಹಕ್ಕುಗಳ ರಕ್ಷಣೆಗೆ ನಾವು ಸದಾ ಸಿದ್ಧ ಎಂದು ಅಭಯ ನೀಡಿದರು.
ಪ್ರಮುಖ ಗಣ್ಯರ ಉಪಸ್ಥಿತಿ
ಸಮ್ಮೇಳನದಲ್ಲಿ ರಾಷ್ಟ್ರೀಯ ಅಧ್ಯಕ್ಷರಾದ ಡಾ. ಚಿ.ನಾ. ರಾಮು ಶ್ರೀ ಮುನಿಕೃಷ್ಣಪ್ಪ (ತಮ್ಮಯ್ಯ) ಶ್ರೀ ಮನೋಜ್, ಹಾಗೂ ಗದಗ ಜಿಲ್ಲಾಧ್ಯಕ್ಷ ಅಂದಪ್ಪ ರಾಮಪ್ಪ ಮಾದರ್ ಸೇರಿದಂತೆ ವಿವಿಧ ಜಿಲ್ಲೆಗಳ ನೂರಾರು ಪದಾಧಿಕಾರಿಗಳು ಭಾಗವಹಿಸಿ ಸಂಘಟನಾತ್ಮಕ ಒಗ್ಗಟ್ಟು ಪ್ರದರ್ಶಿಸಿದರು. ಕಾರ್ಯಕ್ರಮದಲ್ಲಿ ಸಾಧಕ ಪತ್ರಕರ್ತರಿಗೆ ರಾಜ್ಯ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಲಾಯಿತು.
ಈ ವೈಭವೋಪೇತ ಸಂಘಟನಾ ಸಮ್ಮೇಳನವು ಪ್ರತಿಯೊಬ್ಬ ಸದಸ್ಯರ ಪರಿಶ್ರಮ ಮತ್ತು ದೂರದೃಷ್ಟಿಗೆ ಹಿಡಿದ ಕೈಗನ್ನಡಿಯಾಗಿದೆ. ????
ಎಲ್ಲರನ್ನೂ ಒಂದೇ ವೇದಿಕೆಯಲ್ಲಿ ತಂದು, ಹೊಸ ಹುರುಪು ಮತ್ತು ಭವಿಷ್ಯದ ಆಶಾವಾದವನ್ನು ತುಂಬಿದ ಈ ಸಮ್ಮೇಳನವನ್ನು ಆಯೋಜಿಸಿದ ಸಮಿತಿಗೆ ಹಾಗೂ ಭಾಗವಹಿಸಿದ ಎಲ್ಲರಿಗೂ ಹೃದಯಪೂರ್ವಕ ಅಭಿನಂದನೆಗಳು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ದ್ವನಿ ಸಂಘಟನೆ ಜಿಲ್ಲಾ ಅಧ್ಯಕ್ಷರು ಅಂದಪ್ಪ ಮಾದರ
ವರದಿ ಶ್ರೀ ಹುಚ್ಚೀರಪ್ಪ ವೀರಪ್ಪ ಈಟಿ ಕಲ್ಯಾಣ ಕಹಳೆ ಗದಗ ಜಿಲ್ಲಾ ವರದಿಗಾರ

