ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಮತ್ತೆ ಮೂವರ ಬಂಧನ |ಮಂಡ್ಯ

ಹೆಣ್ಣು ಭ್ರೂಣ ಹತ್ಯೆ ಪ್ರಕರಣ  ಮತ್ತೆ ಮೂವರ ಬಂಧನ |ಮಂಡ್ಯ

 ಹೆಣ್ಣು ಭ್ರೂಣ ಹತ್ಯೆ ಪ್ರಕರಣ : ಮತ್ತೆ ಮೂವರ ಬಂಧನ |ಮಂಡ್ಯ 

ಮಂಡ್ಯ : ಭ್ರೂಣ ಪತ್ತೆ ಮತ್ತು ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ

ಪಾಂಡವಪುರ, ಬೆಳ್ಳೂರು, ಮೇಲುಕೋಟೆ ಪೊಲೀಸ್ ಠಾಣೆಗಳಲ್ಲಿ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಆರೋಪಿಗಳು ಭ್ರೂಣ ಪತ್ತೆಗೆ ಬಳಸುತ್ತಿದ್ದ ಎರಡು ಸ್ಕ್ಯಾನಿಂಗ್ ಯಂತ್ರಗಳು ಮತ್ತು ಒಂದು ಕಾರನ್ನು ಪೊಲೀಸ ಅಧಿಕಾರಿಗಳು ವಶಪಡಿಸಿಕೊಂಡಿದ್ದು ತಿಳಿದು ಬಂದಿದೆ.

ಆರೋಪಿಗಳಾದ ಸೋಮಶೇಖರ ಅಲಿಯಾಸ್ ಪಾಟೀಲ್ ,ರಾಮಕೃಷ್ಣ ಅಲಿಯಾಸ್ ಹರೆ ಕೃಷ್ಣ, ಹಾಗೂ ಗುರು ಎಂಬುವರನ್ನು ಬಂಧಿಸಿದ್ದಾರೆ. 

12 ಜನ ಬಂಧಿತರಲ್ಲಿ ಪ್ರಮುಖ ಆರೋಪಿ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಅಭಿಷೇಕ್ ಮತ್ತು ದಾವಣಗೆರೆ ಜಿಲ್ಲೆ ಹೊನ್ನಾಳಿ ಮೂಲದ ವಿರೇಶ್ ಕೂಡ ಇದ್ದಾರೆ. ಈ ಪ್ರಕರಣದಲ್ಲಿ ಇನ್ನೂ ಆರೇಳು ಆರೋಪಿಗಳು ಭಾಗಿಯಾಗಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ ಎಂದು ವರದಿ ಹೇಳಿದೆ.

ಕೃಪೆ : ವಾರ್ತಾಭಾರತಿ