ಬರಪೀಡಿತ ರೈತರಿಗೆ ಪರಿಹಾರಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ
ಬರಪೀಡಿತ ರೈತರಿಗೆ ಪರಿಹಾರಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ
ಕಲಬುರಗಿ: ಜಿಲ್ಲೆ ಜೇವರ್ಗಿ, ಯಡ್ರಾಮಿ ತಾಲೂಕು ಹಾಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ರೈತರು ಬರ ಪರಿಸ್ಥಿತಿಯಿಂದ ಸಂಕಷ್ಟಕ್ಕೆ ಸಿಲುಕಿದ್ದು, ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವಂತೆ ಆಗ್ರಹಿಸಿ ವಿವಿಧ ರೈತಪರ ಸಂಘಟನೆಗಳ ಒಕ್ಕೂಟದ ಹಾಗೂ ಮಠಾಧೀಶರ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಜಿಲ್ಲೆ ಸಮಸ್ತ ರೈತ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಆ.17ರಂದು ಬೆಳಗ್ಗೆ 11 ಗಂಟೆಗೆ ಜೇವರ್ಗಿ ನಗರದ ರಿಲಯನ್ಸ್ ಪೆಟ್ರೋಲ್ ಪಂಪ್ ದಿಂದ ಬಸವೇಶ್ವರ ವೃತ್ತದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ.
ಬರಪೀಡಿತ ತಾಲೂಕುಗಳನ್ನು ಸಂಪೂರ್ಣವಾಗಿ ಬರಪೀಡಿತ ಎಂದು ಘೋಷಿಸಿ, ಬರಗಾಲದ ಪರಿಹಾರವನ್ನು ನೀಡಬೇಕು. ಬೆಳೆ ವಿಮೆ ಪರಿಹಾರ ಸೇರಿದಂತೆ ರೈತರಿಗೆ ಆಗಿರುವ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ಒದಗಿಸಬೇಕು. ರೈತರ ಸಾಲ ಮನ್ನಾ ಮಾಡಿ, ಸಂಕಷ್ಟದಲ್ಲಿರುವ ರೈತ ಕುಟುಂಬಗಳಿಗೆ ಸರ್ಕಾರ ತಕ್ಷಣ ನೆರವು ನೀಡಬೇಕು , ಇನ್ಶುರೆನ್ಸ್ ಕಂಪನಿಯಿಂದ ರೈತರಿಗೆ ಜಿಲ್ಲೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಪ್ರತಿಭಟನಾಕಾರರು ಒತ್ತಾಯಿಸಲಿದ್ದಾರೆ.
ಜಿಲ್ಲೆಯ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿ ಸರ್ಕಾರದ ಗಮನ ಸೆಳೆಯುವಂತೆ ರೈತ ಸಂಘಟನೆಗಳ ಮುಖಂಡರು ಮನವಿ ಮಾಡಿದ್ದಾರೆ.
- ದಿನಾಂಕ: 17-08-2026
- ಸಮಯ:ಬೆಳಗ್ಗೆ 11 ಗಂಟೆ
- ಸ್ಥಳ: ಜೇವರ್ಗಿ ತಾಲೂಕಿನ ರಿಲಯನ್ಸ್ ಪೆಟ್ರೋಲ್ ಪಂಪ್ ರಿಂದ ಬಸವೇಶ್ವರ ವೃತ್ತದ ವರೆಗೆ
- ವರದಿ : ಹಣಮಂತ ದಂಡಗುಲ್ಕರ್,ಬೀಳವಾರ

