“ಅಖಂಡ ಭಾರತ” ಕುರಿತು ವಿಶೇಷ ಉಪನ್ಯಾಸ

“ಅಖಂಡ ಭಾರತ” ಕುರಿತು ವಿಶೇಷ ಉಪನ್ಯಾಸ

 “ಅಖಂಡ ಭಾರತ” ಕುರಿತು ವಿಶೇಷ ಉಪನ್ಯಾಸ

ಕಲಬುರಗಿ: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕಲಬುರಗಿಯ ವಿವೇಕ ವೇದಿಕೆಯ ನೇತೃತ್ವದಲ್ಲಿ “ಅಖಂಡ ಭಾರತ – ನಮ್ಮ ಪರಂಪರೆ, ನಮ್ಮ ಚಿಂತನೆ, ನಮ್ಮ ಜವಾಬ್ದಾರಿ” ಎಂಬ ವಿಷಯದ ಕುರಿತು ಆಗಸ್ಟ್ 12ರಂದು ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ವಿದ್ಯಾಲಯದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಉತ್ತರ ಕರ್ನಾಟಕದ ಪ್ರಾಂತ ಸಂಯೋಜಕರಾದ ಶ್ರೀ ರವೀಂದ್ರ ಜೀ ಅವರು ಭಾಗವಹಿಸಿ, ಅಖಂಡ ಭಾರತದ ಪರಿಕಲ್ಪನೆ, ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆ, ರಾಷ್ಟ್ರೀಯ ಏಕತೆ ಹಾಗೂ ಸಮಗ್ರತೆಯ ಮಹತ್ವ ಕುರಿತು ಪ್ರೇರಣಾದಾಯಕ ಉಪನ್ಯಾಸ ನೀಡಿದರು. ವಿದ್ಯಾರ್ಥಿಗಳು ದೇಶಭಕ್ತಿಯನ್ನು ಬೆಳೆಸಿಕೊಳ್ಳಬೇಕು, ಭಾರತೀಯ ಮೌಲ್ಯಗಳನ್ನು ಸಂರಕ್ಷಿಸಬೇಕು ಹಾಗೂ ರಾಷ್ಟ್ರದ ಪ್ರಗತಿ ಮತ್ತು ಅಭಿವೃದ್ಧಿಗೆ ಸಕ್ರಿಯವಾಗಿ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.

ಉಪನ್ಯಾಸ ಕಾರ್ಯಕ್ರಮವು ಸಂವಾದಾತ್ಮಕವಾಗಿ ನಡೆದಿದ್ದು, ವಿದ್ಯಾರ್ಥಿಗಳು ಆಸಕ್ತಿಯಿಂದ ಭಾಗವಹಿಸಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.

ಕಾರ್ಯಕ್ರಮದಲ್ಲಿ ಸ್ವದೇಶಿ ಚಳುವಳಿ ಜಾಗೃತಿ ಸಮಿತಿಯ ಮಹಾದೇವ ಕರದಳ್ಳಿ, ಗುಲ್ಬರ್ಗ ವಿಶ್ವವಿದ್ಯಾಲಯದ ನಿವೃತ್ತ ಜೈವಿಕ ತಂತ್ರಜ್ಞಾನ ಪ್ರಾಧ್ಯಾಪಕ ಪ್ರೊ. ಚಂದ್ರಕಾಂತ್ ಕೆಳಮನಿ, ನಿವೃತ್ತ ಭೌತಶಾಸ್ತ್ರ ಪ್ರಾಧ್ಯಾಪಕ ಪ್ರೊ. ಬಸವರಾಜ ಕೆರೂರ್, ಅತಿಥಿ ಉಪನ್ಯಾಸಕ ನವೀನಕುಮಾರ, ರಾಷ್ಟ್ರೀಯ ಸೇವಾ ಯೋಜನೆ-ಬ ಘಟಕದ ಕಾರ್ಯಕ್ರಮಾಧಿಕಾರಿ ಮಂಗಲಾ ಬಿರಾದಾರ, ಪ್ರಾಧ್ಯಾಪಕರಾದ ಡಾ. ಜ್ಯೋತಿಪ್ರಕಾಶ ದೇಶಮುಖ, ಡಾ. ರಾಜೇಶ, ಡಾ. ವಿಶ್ವನಾಥ ದೇವರಮನಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯರಾದ ಪ್ರೊ. ರಾಜೇಂದ್ರ ಕೊಂಡ ವಹಿಸಿದ್ದರು. ಇತಿಹಾಸ ವಿಭಾಗದ ಮುಖ್ಯಸ್ಥರು ಹಾಗೂ ರಾಷ್ಟ್ರೀಯ ಸೇವಾ ಯೋಜನೆ-ಬ ಘಟಕದ ಕಾರ್ಯಕ್ರಮಾಧಿಕಾರಿ ಡಾ. ಸುಭಾಷಚಂದ್ರ ದೊಡ್ಡಮನಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ರಾಷ್ಟ್ರೀಯ ಸೇವಾ ಯೋಜನೆ-ಅ ಘಟಕದ ಕಾರ್ಯಕ್ರಮಾಧಿಕಾರಿ ಡಾ. ಶ್ರೀದೇವಿ ಸಿದ್ದಣ್ಣ ವಂದನಾರ್ಪಣೆ ಸಲ್ಲಿಸಿದರು.

ಪ್ರಾಧ್ಯಾಪಕರು, ಉಪನ್ಯಾಸಕರು, ಕಾರ್ಯಕ್ರಮದ ಆಯೋಜಕರು ಹಾಗೂ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಲಾಯಿತು.

ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿದ್ದು, ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯ ಹೆಮ್ಮೆ, ಏಕತೆ, ಜವಾಬ್ದಾರಿ ಹಾಗೂ ದೇಶದ ಬಗ್ಗೆ ಬದ್ಧತೆಯ ಭಾವನೆ ಮೂಡಿಸುವಲ್ಲಿ ಮಹತ್ವದ ಕೊಡುಗೆ ನೀಡಿದೆ ಎಂದು ಮಹಾವಿದ್ಯಾಲಯದ ನ್ಯಾಕ್ ಸಂಯೋಜಕರಾದ ಡಾ. ಮೋಹನರಾಜ ಪತ್ತಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.