ಹಳೆಯ ಮೀಸಲಾತಿ ಅನ್ವಯ ನೇಮಕಾತಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಹಳೆಯ ಮೀಸಲಾತಿ ಅನ್ವಯ ನೇಮಕಾತಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಹಳೆಯ ಮೀಸಲಾತಿ ಅನ್ವಯ ನೇಮಕಾತಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಕಲಬುರಗಿ: ಮೀಸಲಾತಿ ವರ್ಗೀಕರಣಕ್ಕೆ ಸಂಬoಧಿಸಿದ ಪ್ರಕರಣದ ಮಧ್ಯಂತರ ತಡೆಯಾಜ್ಞೆ ಇದ್ದು, ಅಂತಿಮ ತೀರ್ಪು ನ್ಯಾಯಾಲಯದಿಂದ ಹೊರಬರುವವರೆಗೂ ಹಳೆಯ ಮೀಸಲಾತಿ ವ್ಯವಸ್ಥೆಯಂತೆ ನೇಮಕಾತಿ ಮಾಡಬೇಕು ಎಂದು ಆಗ್ರಹಿಸಿ ಎಲ್ಲಾ ಬಂಜಾರಾ ಸಂಘಟನೆ ವತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಮೀಸಲಾತಿ ವರ್ಗೀಕರಣದ ವಿಚಾರದಲ್ಲಿ ನ್ಯಾಯಾಲಯದ ಅಂತಿಮ ತೀರ್ಪು ಬರುವವರೆಗೆ ಯಾವುದೇ ಗೊಂದಲ ಉಂಟಾಗದAತೆ ಹಿಂದಿನ ಮೀಸಲಾತಿ ವ್ಯವಸ್ಥೆಯನ್ನೇ ಮುಂದುವರಿಸಬೇಕು. ಉದ್ಯೋಗ ನೇಮಕಾತಿ ಪ್ರಕ್ರಿಯೆಯಲ್ಲಿ ಅರ್ಹ ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಪೂಜ್ಯ ಬಲಿರಾಮ ಮಹಾರಾಜ, ಮುರಹರಿ ಮಹಾರಾಜ, ಮಾತಾ ಲತಾ ದೇವಿ, ಅಧ್ಯಕ್ಷ ಡಾ. ಸುಭಾಷ್‌ಚಂದ್ರ ರಾಠೋಡ್, ರಾಜ್ಯ ಬಂಜಾರಾ ಸೇವಾ ಸಂಘದ ರಾಜ್ಯ ಕಾರ್ಯದರ್ಶಿ ವಿಠ್ಠಲ ಜಾಧವ್, ಖೇಮಲಿಂಗ ಎಚ್., ಬಿ.ಬಿ. ನಾಯಕ್, ಸಂತೋಷ ಅಡೆ, ಶಾಮರಾವ್ ಪವಾರ್, ನಾಮದೇವ ರಾಠೋಡ್, ಕೃಷ್ಣ ನಾಯಕ್, ಸೈನಿಕ ರಾಠೋಡ್, ಚಂದು ಜಾಧವ್, ರವಿ ರಾಠೋಡ್, ವಿನೋದ್ ಚವ್ಹಾಣ, ಆಕಾಶ್ ರಾಠೋಡ್, ಸುರೇಶ್ ರಾಠೋಡ್, ದತ್ತು ಜಾಧವ್, ಲಕ್ಷ್ಮಣ ರಾಠೋಡ್, ಸುಭಾಷ್ ರಾಠೋಡ್ ಮೋಕ ತಾಂಡಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸರ್ಕಾರ ಪ್ರತಿಭಟನಾಕಾರರ ಬೇಡಿಕೆಯನ್ನು ಪರಿಗಣಿಸಿ, ನ್ಯಾಯಾಲಯದ ಅಂತಿಮ ತೀರ್ಪು ಬರುವವರೆಗೆ ಹಳೆಯ ಮೀಸಲಾತಿ ಅನ್ವಯ ನೇಮಕಾತಿ ಮುಂದುವರಿಸುವ ಕುರಿತು ತಕ್ಷಣ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಮುಖಂಡರು ಆಗ್ರಹಿಸಿದರು.