ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ) ಜಿಲ್ಲಾ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ) ಜಿಲ್ಲಾ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ) ಜಿಲ್ಲಾ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ : ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ) ಕಲಬುರಗಿ ಜಿಲ್ಲಾ ಸಮಿತಿಯ ಸಭೆಯು ನಗರದ ಜಗತ್ ವೃತ್ತದಲ್ಲಿರುವ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಮೆ ಆವರಣದಲ್ಲಿ ನಡೆಯಿತು. ಸಭೆಯಲ್ಲಿ ಬೇರೆ ಬೇರೆ ಸಂಘಟನೆಗಳಿAದ ಆಗಮಿಸಿದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಸಂಚಾಲಕ ಭೀಮಶಾ ಖನ್ನಾ ಮಾತನಾಡಿ, ದಲಿತ ಸಂಘರ್ಷ ಸಮಿತಿಯು ಕಳೆದ ಐದು ದಶಕಗಳಿಂದ ಬುದ್ಧ, ಬಸವ ಹಾಗೂ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ವಿಚಾರಧಾರೆಗಳ ಆಧಾರದ ಮೇಲೆ ಶೋಷಿತರು, ದಮನಿತರು ಹಾಗೂ ಹಿಂದುಳಿದ ವರ್ಗಗಳ ಪರವಾಗಿ ನಿರಂತರ ಹೋರಾಟ ನಡೆಸಿಕೊಂಡು ಬಂದಿದೆ ಎಂದು ಹೇಳಿದರು.

ಇಂದಿನ ಯುವಜನತೆ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಶಿಕ್ಷಣವಿಲ್ಲದೆ ಸಾಮಾಜಿಕ ಹಾಗೂ ಆರ್ಥಿಕ ಪ್ರಗತಿ ಸಾಧಿಸುವುದು ಕಷ್ಟ. ಆದ್ದರಿಂದ ಯುವಕರು ಶಿಕ್ಷಣ ಪಡೆದು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಅವರು ಕರೆ ನೀಡಿದರು.

ನೂತನ ಪದಾಧಿಕಾರಿಗಳ ಕಲಬುರಗಿ ನಗರ ಹಾಗೂ ಜಿಲ್ಲೆಯಾದ್ಯಂತ ಸಂಘಟನೆಯನ್ನು ಮತ್ತಷ್ಟು ಬಲಪಡಿಸಬೇಕು. ಸಾಮಾಜಿಕ ಅನ್ಯಾಯ, ಶೋಷಣೆ ಹಾಗೂ ಕೋಮುವಾದಿ ಶಕ್ತಿಗಳ ವಿರುದ್ಧ ಸಂಘಟಿತವಾಗಿ ಹೋರಾಟ ನಡೆಸಬೇಕು ಎಂದು ಭೀಮಶಾ ಖನ್ನಾ ಹೇಳಿದರು. 

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ) ನೂತನ ಜಿಲ್ಲಾ ಸಹ ಸಂಚಾಲಕರಾಗಿ ವಿಜಯಕುಮಾರ ಜೋಗುರ್ ಕಲಬುರಗಿ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾಗಿ ವಿಠಲ ಶೇಳಗಿ, ಕಲಬುರಗಿ ತಾಲೂಕು ಸಹ ಸಂಚಾಲಕರಾಗಿ ಮಲ್ಲಿಕಾರ್ಜುನ ಹೊಸಮನಿ, ಕಲಬುರಗಿ ನಗರ ಸಹ ಸಂಚಾಲಕರಾಗಿ ಭೀಮಾ ಕಾಂಬಳೆ, ಕಲಬುರಗಿ ಉಪವಿಭಾಗಿಯ ಸಹ ಸಂಚಾಲಕರಾಗಿ ಮಹೇಶಕುಮಾರ ರಾಂಪೂರೆ, ಸತೀಶ ಡಿ. ನಾಯಕ್, ಅಂಕುಶ ಗುತ್ತೇದಾರ, ದಯಾನಂದ ಕೋಹಿನೂರ್, ಸದಸ್ಯರಾದ ಸಂತೋಷಕುಮಾರ ದೊಡ್ಡಮನಿ, ಸಚೀನ ಕೋಬಾಳಕರ್, ಕಲ್ಯಾಣಿ ಜಮಾದಾರ, ಸೂರ್ಯಕಾಂತ ನೀಲೂರಕರ್, ನವೀನ್ ಡಾಂಗೆ (ಸೈಯದ್ ಚಿಂಚೋಳಿ) ಇವರನ್ನು ಆಯ್ಕೆ ಮಾಡಲಾಯಿತು.

ನೂತನ ಪದಾಧಿಕಾರಿಗಳಿಗೆ ಸಂಘಟನೆಯ ಮುಖಂಡರು ಅಭಿನಂದನೆ ಸಲ್ಲಿಸಿ, ಸಂಘಟನೆಯ ತತ್ವ-ಸಿದ್ಧಾಂತಗಳನ್ನು ಪಾಲಿಸುವ ಮೂಲಕ ದಲಿತರು ಹಾಗೂ ಶೋಷಿತ ಸಮುದಾಯಗಳ ಹಕ್ಕುಗಳಿಗಾಗಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸಂ.ಸAಚಾಲಕ ರಾಣು ಮುದ್ದನಕರ್, ಮಡಿವಾಳಪ್ಪ ಕಟ್ಟಿಮನಿ, ಶಿವಕುಮಾರ ಆಜಾದಪೂರ, ಶ್ಯಾಮರಾವ ಶಿಂಧೆ, ದವಲಪ್ಪ ಮದನ, ವಿಜಯಕುಮಾರ ಟೈಗರ್, ಯಲ್ಲಪ್ಪ ದೊಡ್ಡಮನಿ, ವಿಜಯಕುಮಾರ ಶಿಂಧೆ, ಅಭಿಷೇಕ್ ಉಪಾಧ್ಯಾಯ, ಅರುಣಕುಮಾರ ಇನಾಮದಾರ್, ವಿಠಲ ಹಾಗರಗಿ, ಪಾಂಡುರAಗ ಬೀಲ್ಕರ್ ಸೇರಿದಂತೆ ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.