ವೇದಾ ಪಬ್ಲಿಕ್ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

ವೇದಾ ಪಬ್ಲಿಕ್ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

ವೇದಾ ಪಬ್ಲಿಕ್ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

ಕಲಬುರಗಿ: ನಗರದ ಸೇಡಂ ರಸ್ತೆಯಲ್ಲಿರುವ ವೇದಾ ಪಬ್ಲಿಕ್ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮ ಹಾಗೂ ದೇಶಭಕ್ತಿ ಭಾವನೆಯೊಂದಿಗೆ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಲಕ್ಷ್ಮಿ ದತ್ತಾತ್ರೇಯ ಪಾಟೀಲ್ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ, ಬಲಿದಾನ ಹಾಗೂ ದೇಶಪ್ರೇಮವನ್ನು ಪ್ರತಿಯೊಬ್ಬರೂ ಸ್ಮರಿಸಬೇಕು. ವಿದ್ಯಾರ್ಥಿಗಳು ದೇಶದ ಭವಿಷ್ಯದ ನಾಗರಿಕರಾಗಿದ್ದು, ಉತ್ತಮ ಶಿಕ್ಷಣದೊಂದಿಗೆ ದೇಶಪ್ರೇಮ, ಶಿಸ್ತು ಮತ್ತು ಸಾಮಾಜಿಕ ಹೊಣೆಗಾರಿಕೆಯನ್ನು ಬೆಳೆಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.

ಸ್ವಾತಂತ್ರ್ಯೋತ್ಸವದ ಅಂಗವಾಗಿ ಶಾಲಾ ಆವರಣದಲ್ಲಿ ದೇಶಭಕ್ತಿ ಮೂಡಿಸುವ ವಿವಿಧ ಕಾರ್ಯಕ್ರಮಗಳು ನಡೆಯುವ ಮೂಲಕ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಉತ್ಸಾಹದಿಂದ ಭಾಗವಹಿಸಿ ಸ್ವಾತಂತ್ರ್ಯೋತ್ಸವದ ಸಂಭ್ರಮವನ್ನು ಹೆಚ್ಚಿಸಿದರು.

ಈ ಸಂದರ್ಭದಲ್ಲಿ ಡಾ. ರವಿ ಎಸ್. ಮಲಾಶೆಟ್ಟಿ, ಆರತಿ ಆರ್. ಮಲಾಶೆಟ್ಟಿ, ಎಎಸ್ಐ ಅಣ್ಣಪ್ಪ, ಮಾಜಿ ಸೈನಿಕ ಹವಾಲ್ದಾರ್ ಗಂಗರಾಜು ಸೇರಿದಂತೆ ಶಾಲೆಯ ಶಿಕ್ಷಕರು, ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು.