ವಿಶ್ವ ಮಾನವಧಿಕಾರ ಪರಿಷದ ಪದಾಧಿಕಾರಿಗಳಿಗೆ ಪ್ರಮಾಣ ಪತ್ರ, ಗುರುತಿನ ಚೀಟಿ ವಿತರಣೆ
ವಿಶ್ವ ಮಾನವಧಿಕಾರ ಪರಿಷದ ಪದಾಧಿಕಾರಿಗಳಿಗೆ ಪ್ರಮಾಣ ಪತ್ರ, ಗುರುತಿನ ಚೀಟಿ ವಿತರಣೆ
ಕಲಬುರಗಿ: ವಿಶ್ವ ಮಾನವಧಿಕಾರ ಪರಿಷದ, ಕಲಬುರಗಿ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪದಾಧಿಕಾರಿಗಳಿಗೆ ಪ್ರಮಾಣ ಪತ್ರ ಹಾಗೂ ಗುರುತಿನ ಚೀಟಿ ವಿತರಿಸುವ ಕಾರ್ಯಕ್ರಮವನ್ನು ಆಗಸ್ಟ್ 15ರಂದು ಹಮ್ಮಿಕೊಳ್ಳಲಾಯಿತು.
ವಿಶ್ವ ಮಾನವಧಿಕಾರ ಪರಿಷದದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ರಾಜ್ಯಾಧ್ಯಕ್ಷರ ಆದೇಶದ ಮೇರೆಗೆ ಜಿಲ್ಲೆಯ ವಿವಿಧ ಪದಾಧಿಕಾರಿಗಳಿಗೆ ನೇಮಕಾತಿ ಪ್ರಮಾಣ ಪತ್ರ ಹಾಗೂ ಗುರುತಿನ ಚೀಟಿಗಳನ್ನು ವಿತರಿಸಲಾಯಿತು. ಜಿಲ್ಲಾ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪರಿಷದದ ಸರ್ವ ಸದಸ್ಯರಿಗೆ ಗುರುತಿನ ಚೀಟಿ ಮತ್ತು ಪ್ರಮಾಣ ಪತ್ರಗಳನ್ನು ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾಗಿ ನಿಸಾರ ಅಹ್ಮದ್ ಖಾನ್, ಜಿಲ್ಲಾ ಉಪಾಧ್ಯಕ್ಷರಾಗಿ ಅಲ್ಲಿಸಾ ಎಂ. ಅಗಸಿಮನಿ, ಜಿಲ್ಲಾ ಕಾರ್ಯದರ್ಶಿಯಾಗಿ ಮಹ್ಮದ್ ಇಮ್ರಾನ್, ಜಿಲ್ಲಾ ಸಹಾಯಕ ಕಾರ್ಯದರ್ಶಿಯಾಗಿ ಡಾ. ಜಾಕೀರ್ ಹುಸೇನ್, ಕಾರ್ಯದರ್ಶಿಯಾಗಿ ಮಹ್ಮದ್ ಆಸೀಫ್ ಅಲಿ ಸೇರಿದಂತೆ ಪದಾಧಿಕಾರಿಗಳು ಹಾಗೂ ಸದಸ್ಯರಿಗೆ ಪ್ರಮಾಣ ಪತ್ರ ಮತ್ತು ಗುರುತಿನ ಚೀಟಿಗಳನ್ನು ವಿತರಿಸಲಾಯಿತು.
ಪರಿಷದದ ಸದಸ್ಯರಾದ ಎಂ.ಡಿ. ಅಬ್ದುಲ್ ಹಮೀದ್, ಕಲ್ಯಾಣಿ ತಳವಾರ (ಜಿಲ್ಲಾ ಮಾಧ್ಯಮ ಪ್ರತಿನಿಧಿ), ಶೇಕ್ ಸುಲೇಮಾನ್, ಫಯಾಜ್ ಪಾಷಾ, ಇಮ್ರಾನ್ ಖಾನ್, ಮಹ್ಮದ್ ರಿಜ್ವಾನ್ ಪಾಷಾ, ಅಂಬಣ್ಣ, ಅಣ್ಣಾರಾವ್ ನಾಮದಿ ಹಾಗೂ ರಫೀಯಾ ಬೇಗಂ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವಿಶ್ವ ಮಾನವ ಹಕ್ಕುಗಳ ರಕ್ಷಣೆ, ಜನರಲ್ಲಿ ಹಕ್ಕುಗಳ ಕುರಿತು ಜಾಗೃತಿ ಮೂಡಿಸುವುದು ಹಾಗೂ ಸಮಾಜದಲ್ಲಿ ನ್ಯಾಯ ಮತ್ತು ಸಮಾನತೆಯ ಆಶಯಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಸಂಘಟನೆಯ ಪದಾಧಿಕಾರಿಗಳು ಕಾರ್ಯನಿರ್ವಹಿಸುವುದಾಗಿ ತಿಳಿಸಲಾಯಿತು.

