ಭಾವೈಕ್ಯ ಭಾರತವನ್ನು ನಿರ್ಮಿಸುವಲ್ಲಿ ಯುವಜನರ ಪಾತ್ರ ಅತ್ಯಂತ ಮಹತ್ವದಾಗಿದೆ: ಮೌನೇಶ
ಭಾವೈಕ್ಯ ಭಾರತವನ್ನು ನಿರ್ಮಿಸುವಲ್ಲಿ ಯುವಜನರ ಪಾತ್ರ ಅತ್ಯಂತ ಮಹತ್ವದಾಗಿದೆ: ಮೌನೇಶ
ಕಲಬುರಗಿ: ಭಾವೈಕ್ಯ ಭಾರತವನ್ನು ನಿರ್ಮಿಸುವಲ್ಲಿ ಯುವಜನರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಪ್ರಭಾರಿ ಮುಖ್ಯ ಗುರುಗಳಾದ ಮೌನೇಶ ನಿಂಬಾಳ ಅಭಿಪ್ರಾಯಪಟ್ಟರು.
ನಗರದ ಹೊರವಲಯದ ಕಪನೂರ ಸಿದ್ಧಾರೂಢ ಕಾಲೋನಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಯುವಜನರನ್ನು ಹೊಂದಿರುವ ರಾಷ್ಟವಾಗಿದ್ದು, ದೇಶದ ಭವಿಷ್ಯ ಯುವಶಕ್ತಿಯ ಕೈಯಲ್ಲಿದೆ ಎಂದು ಹೇಳಿದರು. ಇತ್ತೀಚಿನ ದಿನಗಳಲ್ಲಿ ಯುವಜನರು ಮಾದಕ ವ್ಯಸನ ಸೇರಿದಂತೆ ವಿವಿಧ ದುಶ್ಚಟಗಳಿಗೆ ಒಳಗಾಗುವ ವಾತಾವರಣ ನಿರ್ಮಾಣವಾಗಿದ್ದು, ಇದಕ್ಕೆ ಸಮಾಜದ ಎಲ್ಲ ವರ್ಗಗಳೂ ಕಾರಣಿಕರ್ತರಾಗಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.
ಭಾರತದ ಸ್ವಾತಂತ್ರ್ಯಕ್ಕಾಗಿ ಅನೇಕ ಮಹನೀಯರು ತಮ್ಮ ಪ್ರಾಣ ತ್ಯಾಗ ಮಾಡಿ, ಬಲಿದಾನ ಸಲ್ಲಿಸಿದ ಪರಿಣಾಮ ನಮಗೆ ಸ್ವಾತಂತ್ರ್ಯ ದೊರೆತಿದೆ. ಇಂದು ಭಾರತವು ವಿಶ್ವದ ವೇಗವಾಗಿ ಬೆಳೆಯುತ್ತಿರುವ ರಾಷ್ಟ್ರಗಳಲ್ಲಿ ಒಂದಾಗಿದ್ದು. ಯುವಜನರು ಭಾರತೀಯ ಸಂಸ್ಕೃತಿ,ಆಚಾರ- ವಿಚಾರಗಳನ್ನು ಮೈಗೂಡಿಸಿಕೊಳ್ಳುವ ಜೊತೆಗೆ ಉತ್ತಮ ವಿ ಪರಿಸರ ಪರಿಸರ ನಿರ್ಮಾಣದ ನಾಣದ ಜವಾಬ್ದ ಜವಾಬ್ದಾರಿಯನ್ನು ಹೊತ್ತುಕೊಳ್ಳಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ನಾಗಯ್ಯ ಗುತ್ತೇದಾರ,ಶರಣು ಪೂಜಾರಿ,ಸಂಜೀವ ಗುತ್ತೇದಾರ,ಪುಂಡಲೀಕ ಜಮಾದಾರ, ಶ್ರೀಮತಿ ಸುವರ್ಣ ಗುತ್ತೇದಾರ,ಶ್ರೀಮತಿ ಇಂದುಬಾಯಿ ಜಮಾದಾರ, ಶ್ರೀಮತಿ ವಿಜಯಲಕ್ಷ್ಮೀ, ಶಿಕ್ಷಕಿ ಕು.ಭಾಗ್ಯ ಹಾಗೂ ಸಂಗಯ್ಯ ಗುತ್ತೇದಾರ ಸೇರಿದಂತೆ ಬಡಾವಣೆಯ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

