ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ
ಕಮಲನಗರ:ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕಮಲನಗರದ ರೈತ ಸಂಪರ್ಕ ಕೇಂದ್ರದಲ್ಲಿ ರೈತ ಸಂಪರ್ಕ ಅಧಿಕಾರಿ ಎಒ ಶತ್ರುಘ್ನ ಅವರು ಧ್ವಜಾರೋಹಣ ನೆರವೇರಿಸಿದರು.
ಕಾರ್ಯಕ್ರಮವನ್ನು ದೇಶಭಕ್ತಿ ಹಾಗೂ ಸಂಭ್ರಮದ ವಾತಾವರಣದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ರೈತರು, ರೈತ ಮುಖಂಡರು, ಕೃಷಿ ಇಲಾಖೆಯ ಸಿಬ್ಬಂದಿ ಹಾಗೂ ಸಾರ್ವಜನಿಕರು ಭಾಗವಹಿಸಿ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು. ಧ್ವಜಾರೋಹಣದ ನಂತರ ರಾಷ್ಟ್ರಗೀತೆ ಹಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸಲಾಯಿತು.
ಈ ಸಂದರ್ಭದಲ್ಲಿ ಎಒ ಶತ್ರುಘ್ನ ಅವರು ಮಾತನಾಡಿ “ದೇಶದ ಬೆನ್ನೆಲುಬಾಗಿರುವ ರೈತರ ಅಭಿವೃದ್ಧಿ ಮತ್ತು ಕೃಷಿ ಕ್ಷೇತ್ರದ ಬಲವರ್ಧನೆಗೆ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ರೈತರಿಗೆ ಸರ್ಕಾರದ ಸೌಲಭ್ಯಗಳು ಹಾಗೂ ಯೋಜನೆಗಳು ಸಮರ್ಪಕವಾಗಿ ತಲುಪುವಂತಾಗಬೇಕು” ಎಂದು ಹೇಳಿದರು.
ಸ್ವಾತಂತ್ರ್ಯ ದಿನಾಚರಣೆಯು ದೇಶದ ಏಕತೆ, ಸಹೋದರತ್ವ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಮತ್ತಷ್ಟು ಬಲಪಡಿಸುವ ಸಂಕಲ್ಪದ ದಿನವಾಗಿದೆ ಎಂದರು.
ಈ ಸಂದರ್ಭದಲ್ಲಿ ರೈತ ಸಂಘದ ಅಧ್ಯಕ್ಷ ಸದಸ್ಯಪ್ರವೀಣ ಕುಲಕರ್ಣಿ, ಪ್ರಧಾನ ಕಾರ್ಯದರ್ಶಿ ಪ್ರಶಾಂತ ಖಾನಾಪುರೆ, ಪದಾಧಿಕಾರಿ ಗಳಾದ ಉತ್ತಮ ಮಾನೆ, ವಿಠ್ಠಲ ಪಾಟೀಲ ಯುವರಾಜ,ಪ್ರಭುರಾವ್, ದೇಶಮುಖ , ಅಮೋಲ ಮತ್ತು ರೈತ ಸಂಪರ್ಕ ಅಧಿಕಾರಿ ಶತ್ರುಘ್ನ, ಪಂಡರಿ, ರೈತರಾದ ರಾಜಕುಮಾರ ರಾಮಪುರ ಪ್ರದೀಪ್ ಪಾಟೀಲ ಅನೇಕ ಜನ ರೈತರು , ರೈತ ಮುಖಂಡರು ಉಪಸ್ಥಿತರಿದ್ದರು.

