ದೇವರಾಜ ಅರಸು ಜಯಂತೋತ್ಸವ ಸಮಿತಿ ಅಧ್ಯಕ್ಷರಾಗಿ ವಿನೋದ್ ಕುಮಾರ್ ಜೇನೇವರ ನೇಮಕ

ದೇವರಾಜ ಅರಸು ಜಯಂತೋತ್ಸವ ಸಮಿತಿ ಅಧ್ಯಕ್ಷರಾಗಿ ವಿನೋದ್ ಕುಮಾರ್ ಜೇನೇವರ ನೇಮಕ

ದೇವರಾಜ ಅರಸು ಜಯಂತೋತ್ಸವ ಸಮಿತಿ ಅಧ್ಯಕ್ಷರಾಗಿ ವಿನೋದ್ ಕುಮಾರ್ ಜೇನೇವರ ನೇಮಕ

ಕಲಬುರಗಿ: ಮಾಜಿ ಮುಖ್ಯಮಂತ್ರಿ ಹಾಗೂ ಹಿಂದುಳಿದ ವರ್ಗಗಳ ಹರಿಕಾರರಾಗಿದ್ದ ಡಿ. ದೇವರಾಜ ಅರಸು ಅವರ ಜಯಂತೋತ್ಸವವನ್ನು ಯಶಸ್ವಿಯಾಗಿ ಆಚರಿಸುವ ಉದ್ದೇಶದಿಂದ ಕಲಬುರಗಿ ಜಿಲ್ಲಾ ದೇವರಾಜ ಅರಸು ಜಯಂತೋತ್ಸವ ಸಮಿತಿಯ ಅಧ್ಯಕ್ಷರಾಗಿ ವಿನೋದ್ ಕುಮಾರ್ ಜೇನೇವರ ಅವರನ್ನು ನೇಮಕ ಮಾಡಲಾಗಿದೆ.

 ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಆದೇಶ ಹೊರಡಿಸಿದ್ದು, ಜಯಂತೋತ್ಸವದ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ ಯಶಸ್ವಿಯಾಗಿ ಆಯೋಜಿಸುವ ಜವಾಬ್ದಾರಿಯನ್ನು ವಿನೋದ್ ಕುಮಾರ್ ಜೇನೇವರ ಅವರಿಗೆ ವಹಿಸಿದ್ದಾರೆ.

ಜಿಲ್ಲೆಯ ಹಿಂದುಳಿದ ವರ್ಗಗಳ ಸಂಘ-ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ ಜಯಂತೋತ್ಸವವನ್ನು ಯಶಸ್ವಿಗೊಳಿಸಬೇಕೆಂದು ಇಲಾಖೆಯ ವತಿಯಿಂದ ಕೋರಲಾಗಿದೆ.

ದೇವರಾಜ ಅರಸು ಅವರು ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ ನಾಯಕರಾಗಿದ್ದು, ಅವರ ಆದರ್ಶಗಳು ಹಾಗೂ ಜನಪರ ಕಾರ್ಯಗಳನ್ನು ಸ್ಮರಿಸುವ ನಿಟ್ಟಿನಲ್ಲಿ ಜಯಂತೋತ್ಸವವನ್ನು ಜಿಲ್ಲೆಯಲ್ಲಿ ವಿಜೃಂಭಣೆಯಿಂದ ಆಚರಿಸಲು ಸಿದ್ಧತೆ ಕೈಗೊಳ್ಳಲಾಗುತ್ತಿದೆ. ಕಾರ್ಯಕ್ರಮಕ್ಕೆ ಆಗಮಿಸಬೇಕೆಂದು ಅಧಿಕಾರಿಗಳಿಗೆ , ಸಂಘ ಸಂಸ್ಥೆಯ ಪದಾಧಿಕಾರಿಗಳಿಗೆ ಮತ್ತು ಗಣ್ಯ ವ್ಯಕ್ತಿಗಳಿಗೆ ಆಮಂತ್ರಣ ಪತ್ರಿಕೆ ನೀಡಿದ್ದಾರೆ.