111ನೇ ದೇವರಾಜ ಅರಸು ಜಯಂತಿ: ಅದ್ಧೂರಿ ಆಚರಣೆಗೆ ಭರ್ಜರಿ ಪೂರ್ವ ತಯಾರಿ
111ನೇ ದೇವರಾಜ ಅರಸು ಜಯಂತಿ: ಅದ್ಧೂರಿ ಆಚರಣೆಗೆ ಭರ್ಜರಿ ಪೂರ್ವ ತಯಾರಿ
ಕಲಬುರಗಿ: ಮಾಜಿ ಮುಖ್ಯಮಂತ್ರಿ ಹಾಗೂ ಹಿಂದುಳಿದ ವರ್ಗಗಳ ಹರಿಕಾರ ಡಿ. ದೇವರಾಜ ಅರಸು ಅವರ 111ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಚರಿಸಲು ಪೂರ್ವ ತಯಾರಿ ಸಭೆಯಲ್ಲಿ ವಿವಿಧ ಕಾರ್ಯಕ್ರಮಗಳ ಕುರಿತು ಚರ್ಚಿಸಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಯಿತು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ನೇತೃತ್ವದಲ್ಲಿ ನಡೆದ ಪೂರ್ವ ತಯಾರಿ ಸಭೆಯಲ್ಲಿ ಸಂಗಮೇಶ, ವ್ಯವಸ್ಥಾಪಕರಾದ ಹಿರೇಗೌಡ, ತಾಲೂಕು ಮಟ್ಟದ ಶ್ರೀಮತಿ ಅನುಸೂಯಬಾಯಿ, ಯುವ ನಾಯಕ ಕುಮಾರ ಯಾದವ, ಬಸವರಾಜ ರಾವೂರ, ಮಲ್ಲಿಕಾರ್ಜುನ ಜೋಳದ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸಭೆಯಲ್ಲಿ ದೇವರಾಜ ಅರಸು ಜಯಂತೋತ್ಸವ ಸಮಿತಿಯ ಅಧ್ಯಕ್ಷ ಹಾಗೂ ನ್ಯಾಯವಾದಿ ವಿನೋದ ಕುಮಾರ ಜೇನವೆರಿ ಅವರು ಭಾಗವಹಿಸಿ, ನಾಳೆ ನಡೆಯಲಿರುವ ಜಯಂತಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕೈಗೊಳ್ಳಬೇಕಾದ ಸಿದ್ಧತೆಗಳ ಕುರಿತು ಚರ್ಚಿಸಿದರು. ಇದೇ ಸಂದರ್ಭದಲ್ಲಿ ನೇಕಾರ ಸ್ನೇಹಿತರ ಬಳಗದ ಸದಸ್ಯರು ಸಹ ಸಭೆಯಲ್ಲಿ ಹಾಜರಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಹಕಾರ ನೀಡುವ ಭರವಸೆ ನೀಡಿದರು.
ಜಯಂತಿ ಅಂಗವಾಗಿ ನಡೆಯಲಿರುವ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ಹಿಂದುಳಿದ ವರ್ಗಗಳ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಮುಖಂಡರು ಹಾಗೂ ಯುವಕರು ಭಾಗವಹಿಸುವಂತೆ ಮನವಿ ಮಾಡಲಾಯಿತು. ಕಾರ್ಯಕ್ರಮದಲ್ಲಿ ದೇವರಾಜ ಅರಸರ ಸಾಮಾಜಿಕ ನ್ಯಾಯ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಶೈಕ್ಷಣಿಕ ಮತ್ತು ಸಾಮಾಜಿಕ ಸುಧಾರಣೆಗಳ ಕೊಡುಗೆಯನ್ನು ಸ್ಮರಿಸಲಾಗುವುದು.
ನಾಳಿನ ಜಯಂತಿ ಕಾರ್ಯಕ್ರಮ ಯಶಸ್ವಿಗೊಳಿಸಲು ಎಲ್ಲ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆ ಕೈಗೊಳ್ಳಲಾಗಿದೆ.

