ಬರ ಘೋಷಣೆಗೆ ಆಗ್ರಹಿಸಿ ಕಲಬುರಗಿ ಬಂದ್ ಗೆ ಹೋಟೆಲ್ ಸಂಘದ ಬೆಂಬಲ
ಬರ ಘೋಷಣೆಗೆ ಆಗ್ರಹಿಸಿ ಕಲಬುರಗಿ ಬಂದ್ ಗೆ ಹೋಟೆಲ್ ಸಂಘದ ಬೆಂಬಲ
ಕಲಬುರಗಿ : ಮಳೆಯ ಅಭಾವದಿಂದ ತೀವ್ರ ಬರಗಾಲ ಎದುರುಸುತ್ತಿರುವ ಕಲಬುರಗಿ ಜಿಲ್ಲೆಗೆ ಸರಕಾರವು ತಕ್ಷಣ ಸ್ಪಂದಿಸಬೇಕು ಎಂದು ಒತ್ತಾಯಿಸಿ ಕರೆ ನೀಡಿರುವ ಬಂದ್ ಗೆ ಜಿಲ್ಲಾ ಹೋಟೆಲ್ ವಸತಿ ಮತ್ತು ಬೇಕರಿ ಮಾಲೀಕರ ಸಂಘವು ಬೆಂಬಲ ವ್ಯಕ್ತಪಡಿಸಿದೆ.
ಜಿಲ್ಲೆಯಲ್ಲಿ ಆ 20ರಂದು ಬಂದ್ ಮಾಡಲು ಸಂಯುಕ್ತ ಹೋರಾಟ ಕರ್ನಾಟಕ ಸಮಿತಿಯ ನೇತೃತ್ವದಲ್ಲಿ ಕರೆ ನೀಡಿರುವುದರಿಂದ ಸಂಘವು ಬೆಂಬಲಿಸಲು ನಿರ್ಧಾರ ಕೈಗೊಂಡಿದೆ ಎಂದು ಅಧ್ಯಕ್ಷ ನರಸಿಂಹ ಮೆಂಡನ್ ತಿಳಿಸಿದ್ದಾರೆ.
ಕಲಬುರಗಿ ಜಿಲ್ಲೆಯಲ್ಲಿ ಎಲ್ ನಿನೋ ಕಾರಣದಿಂದ ಮಳೆ ಕೊರತೆ ಉಂಟಾಗಿದ್ದು ರೈತರು ಸಂಕಷ್ಟಕ್ಜೆ ಸಿಲುಕ್ಕಿದ್ದಾರೆ. ಬರ ಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಿದರೆ ರೈತಾಪಿ ವರ್ಗಕ್ಕೆ ಅನುಕೂಲವಾಗಲಿದೆ. ಹೋಟೆಲ್ ಸಂಘ ಯಾವತ್ತೂ ರೈತರ ಪರವಾಗಿ ನಿಲ್ಲಲಿದೆ ಎಂದು ಮೆಂಡನ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

