ಕುಸನೂರಿನಲ್ಲಿ ಆ.31ರಂದು ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ
ಕುಸನೂರಿನಲ್ಲಿ ಆ.31ರಂದು ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ
ಕಲಬುರಗಿ: ಜಿಲ್ಲೆಯ ಕುಸನೂರ ಗ್ರಾಮದ ಸುಕ್ಷೇತ್ರ ಶ್ರೀ ಗವಿಸಿದ್ದೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ಸೋಮವಾರದ ಅಂಗವಾಗಿ ಆಗಸ್ಟ್ 31ರಂದು ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವವು ವಿಜೃಂಭಣೆಯಿಂದ ನಡೆಯಲಿದೆ.
ಪ್ರತಿ ವರ್ಷದಂತೆ ಈ ವರ್ಷವೂ ಜಾತ್ರಾ ಮಹೋತ್ಸವವನ್ನು ಭಕ್ತಿಭಾವದಿಂದ ಆಚರಿಸಲು ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಜಾತ್ರಾ ಮಹೋತ್ಸವಕ್ಕೆ ಸುತ್ತಮುತ್ತಲಿನ ಗ್ರಾಮಗಳು ಸೇರಿದಂತೆ ವಿವಿಧೆಡೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆಯಿದೆ.
ಭಕ್ತಾದಿಗಳು ಜಾತ್ರಾ ಮಹೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ಗವಿಸಿದ್ದೇಶ್ವರ ಸ್ವಾಮಿಯ ದರ್ಶನ ಪಡೆದು, ಗುರುವಿನ ಕೃಪಾಶೀರ್ವಾದಕ್ಕೆ ಪಾತ್ರರಾಗಬೇಕು ಎಂದು ಶ್ರೀ ಗವಿಸಿದ್ದೇಶ್ವರ ದೇವಸ್ಥಾನದ ವ್ಯವಸ್ಥಾಪಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಜಿಲ್ಲಾ ಗೌರವಾಧ್ಯಕ್ಷರಾದ ಡಾ. ಮಂಜು ಕುಸನೂರ ಅವರು ಸದ್ಭಕ್ತರಲ್ಲಿ ಮನವಿ ಮಾಡಿದ್ದಾರೆ.
ಶ್ರೀ ಗವಿಸಿದ್ದೇಶ್ವರ ಜಾತ್ರೆಯಲ್ಲಿ ಕುಸ್ತಿ, ಪಲ್ಲಕ್ಕಿ ಉತ್ಸವ, ಕರ್ತೃ ಗದ್ದಿಗೆಗೆ ರುದ್ರಾಭಿಷೇಕ, ನಿನ್ನ ಪ್ರಸಾದ ವ್ಯವಸ್ಥೆ ಕೂಡ ಮಾಡಲಾಗಿದೆ,ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು ವಿಶೇಷವಾಗಿ ದೇವಸ್ಥಾನಕ್ಕೆ ಆಗಮಿಸಲು ಕಲಬುರಗಿ ನಗರದ ಸೂಪರ್ ಮಾರ್ಕೆಟ್ ನಿಂದ ಕೃಷ್ಣನೂರು ಗ್ರಾಮದವರೆಗೆ ಮಾಡಲಾಗಿದೆ ಎಂದು ದೇವಸ್ಥಾನ, ಆಡಳಿತ ಮಂಡಳಿಯ ಹಿರಿಯರಾದ ಶ್ರೀ ಮಲ್ಲಯ್ಯ ಸ್ವಾಮಿ, ರೇವಣಯಸಿದ್ದಯ್ಯ ಸ್ವಾಮಿ, ಅವರು ಭಕ್ತರಿಗೆ ತಿಳಿಸಿದರು.
ಸ್ಥಳ: ಶ್ರೀ ಗವಿಸಿದ್ದೇಶ್ವರ ದೇವಸ್ಥಾನ, ಕುಸನೂರ, ಕಲಬುರಗಿ ಜಿಲ್ಲೆ
ದಿನಾಂಕ: 31-08-2026
ಡಾ. ಮಂಜು ಕುಸನೂರ

