ಆ. 23ರಿಂದ ಲಕ್ಷ್ಮೀ ಪೊದ್ದಾರ ಅವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ
ಆ. 23ರಿಂದ ಲಕ್ಷ್ಮೀ ಪೊದ್ದಾರ ಅವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ
ಕಲಬುರಗಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಧನಸಹಾಯದಡಿ ಯುವ ಚಿತ್ರಕಲಾವಿದೆ ಲಕ್ಷ್ಮೀ ಆರ್. ಪೊದ್ದಾರ ಅವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನವು ಆ. 23ರಿಂದ 25ರವರೆಗೆ ನಗರದ ಬಿಸಿಲು ಆರ್ಟ್ ಗ್ಯಾಲರಿಯಲ್ಲಿ ನಡೆಯಲಿದೆ.
ಆ. 23ರಂದು ಬೆಳಿಗ್ಗೆ 10.30ಕ್ಕೆ ಕರ್ನಾಟಕ ಲಲಿತಕಲಾ ಅಕಾಡೆಮಿ ಸದಸ್ಯ ಹಾಗೂ ಹಿರಿಯ ಚಿತ್ರಕಲಾವಿದ ಬಸವರಾಜ ಎಲ್. ಜಾನೆ ಅವರು ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಕೃತಿಕಾ ಸಾಂಸ್ಕೃತಿಕ ಸಂಸ್ಥೆಯ ಕಾರ್ಯದರ್ಶಿ ಮಂಜುಳಾ ಜಾನೆ ಹಾಗೂ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಸಂಗೀತ ಮತ್ತು ಲಲಿತಕಲಾ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಶಿವಾನಂದ ಬಂಟನೂರ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ವ್ಹಿ.ಬಿ. ಬಿರಾದಾರ ಕಲಾ ಪ್ರತಿಷ್ಠಾನದ ಉಪಾಧ್ಯಕ್ಷೆ ಶೈಲಜಾ ಬಿರಾದಾರ ಅಧ್ಯಕ್ಷತೆ ವಹಿಸಲಿದ್ದಾರೆ.
ಗುಲಬರ್ಗಾ ವಿಶ್ವವಿದ್ಯಾಲಯದಿಂದ ಚಿತ್ರಕಲೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಲಕ್ಷ್ಮೀ ಆರ್. ಪೊದ್ದಾರ ಅವರು ವಿವಿಧ ಮಾಧ್ಯಮಗಳಲ್ಲಿ ರಚಿಸಿರುವ 15ಕ್ಕೂ ಹೆಚ್ಚು ಚಿತ್ರಕಲಾಕೃತಿಗಳು ಪ್ರದರ್ಶನಗೊಳ್ಳಲಿವೆ. ಅವರು ರಾಜ್ಯಮಟ್ಟದ 10ಕ್ಕೂ ಹೆಚ್ಚು ಕಲಾ ಪ್ರದರ್ಶನಗಳು ಹಾಗೂ ಕಲಾ ಶಿಬಿರಗಳಲ್ಲಿ ಭಾಗವಹಿಸಿದ್ದಾರೆ.
ಗುಲಬರ್ಗಾ ವಿಶ್ವವಿದ್ಯಾಲಯದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಹಾಗೂ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕಲಾ ಸ್ಪರ್ಧೆಯ ಪ್ರಶಸ್ತಿ ಸೇರಿದಂತೆ 10ಕ್ಕೂ ಹೆಚ್ಚು ಪ್ರಶಸ್ತಿಗಳನ್ನು ಅವರು ಪಡೆದಿದ್ದಾರೆ.
ಆ. 23ರಿಂದ 25ರವರೆಗೆ ಪ್ರತಿದಿನ ಬೆಳಿಗ್ಗೆ 10.30ರಿಂದ ಸಂಜೆ 6ರವರೆಗೆ ಪ್ರದರ್ಶನ ನಡೆಯಲಿದ್ದು, ಸಾರ್ವಜನಿಕರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ.

