ಡಾ. ಟಿ. ಎಂ. ಭಾಸ್ಕರ ದತ್ತಿ ಉಪನ್ಯಾಸ ಆ.25ರಂದು
ಡಾ. ಟಿ. ಎಂ. ಭಾಸ್ಕರ ದತ್ತಿ ಉಪನ್ಯಾಸ ಆ.25ರಂದು
ಜೇವರ್ಗಿ : ಕನ್ನಡನಾಡು ಲೇಖಕರ ಮತ್ತು ಓದುಗರ ಸಹಕಾರ ಸಂಘ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು, ಜೇವರ್ಗಿ ಕನ್ನಡ ವಿಭಾಗದ ಸಹಯೋಗದಲ್ಲಿ ಡಾ. ಟಿ. ಎಂ. ಭಾಸ್ಕರ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಆ.25ರಂದು ಮಧ್ಯಾಹ್ನ 12 ಗಂಟೆಗೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದೆ.
ಕಾಲೇಜಿನ ಪ್ರಾಂಶುಪಾಲರಾದ ಡಾ. ಶಾಂತಾ ಅಷ್ಠಗಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ಸಾಹಿತಿ ಡಾ. ಶ್ರೀಶೈಲ್ ನಾಗರಾಜ್, ಕಲಬುರಗಿ ಅವರು ಉಪನ್ಯಾಸ ನೀಡಲಿದ್ದು, “ವಿ. ಕೃ. ಗೋಕಾಕ” ವಿಷಯದ ಕುರಿತು ವಿಚಾರ ಮಂಡಿಸಲಿದ್ದಾರೆ.
ಕನ್ನಡನಾಡು ಲೇಖಕರ ಮತ್ತು ಓದುಗರ ಸಹಕಾರ ಸಂಘದ ಅಧ್ಯಕ್ಷ ಶ್ರೀ ಅಪ್ಪಾರಾವ ಅಕ್ಕೋಣಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದು, ಸಾಹಿತಿ ಡಾ ಸ್ವಾಮಿರಾವ ಕುಲಕರ್ಣಿ, ಎಸ್ .ಕೆ.ಬಿರಾದಾರ,ಪ್ರೊ.ನಾಗಪ್ಪಾ ಕಿಲಾರಿ ,ಡಾ ಶರಣಬಸಪ್ಪ ವಡ್ಡನಕೇರಿ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಕಾಲೇಜಿನ ಕನ್ನಡ ವಿಭಾಗದ ಪ್ರಾಧ್ಯಾಪಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕನ್ನಡ ಸಾಹಿತ್ಯಾಸಕ್ತರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಂಘದ ಪದಾಧಿಕಾರಿಗಳು ಹಾಗೂ ಕಾಲೇಜಿನ ಕನ್ನಡ ವಿಭಾಗದ ವತಿಯಿಂದ ಮನವಿ ಮಾಡಲಾಗಿದೆ.

