ಬೆಂಗಳೂರು ವಿ.ವಿ.ಯ ಕನ್ನಡ ಐಚ್ಛಿಕ ವಿಷಯದ ಪದವಿ ಪಠ್ಯಪುಸ್ತಕ ಆಯ್ಕೆ ಸಮಿತಿ ಸದಸ್ಯೆಯಾಗಿ ಡಾ. ಮಂಜುಶ್ರೀ ಎಂ. ಕಡಕೋಳ ನೇಮಕ

ಕಲಬುರಗಿ: ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಐಚ್ಛಿಕ ವಿಷಯದ ಪದವಿ ಪಠ್ಯಪುಸ್ತಕ ಆಯ್ಕೆ ಸಮಿತಿ ಸದಸ್ಯೆಯಾಗಿ ಕಲಬುರಗಿ ಜಿಲ್ಲೆಯ ಕಡಕೋಳ ಗ್ರಾಮದ ಡಾ. ಮಂಜುಶ್ರೀ ಎಂ. ಕಡಕೋಳ ಅವರನ್ನು ನೇಮಕ ಮಾಡಿರುವುದಕ್ಕೆ ಕಲ್ಯಾಣ ಕರ್ನಾಟಕದ ಸಾಹಿತಿಗಳು ಹಾಗೂ ಸಾಹಿತ್ಯಾಸಕ್ತರು ಹರ್ಷ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಪತ್ರಿಕೆಯ ಹಿರಿಯ ಉಪಸಂಪಾದಕಿ ಆಗಿರುವ ಅವರು ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿರುವರು. ಡಾ. ಮಂಜುಶ್ರೀ ಎಂ. ಕಡಕೋಳ ಅವರು, ಕಡಕೋಳದ ಶ್ರೀ ಮಡಿವಾಳ ಶಿವಯೋಗಿಗಳ ನೆಲದ ಕುಡಿಯಾಗಿ ಸಾಹಿತ್ಯದ ಕೆಲಸ ಮಾಡುತ್ತಿರುವುದು ಅತ್ಯಂತ ಸಂತೋಷದ ಸಂಗತಿಯಾಗಿದೆ ಎಂದು ಸಾಹಿತಿಗಳು ಹರ್ಷ ವ್ಯಕ್ತಪಡಿಸಿದರು.

ಕಲ್ಯಾಣ ಕರ್ನಾಟಕದ ಸಾಹಿತ್ಯ, ಸಂಸ್ಕೃತಿ ಹಾಗೂ ಜನಪದ ಪರಂಪರೆಯನ್ನು ಅರಿತಿರುವ ಮಂಜುಶ್ರೀ ಅವರು ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಐಚ್ಛಿಕ ವಿಷಯದ ಪದವಿ ಪಠ್ಯಪುಸ್ತಕ ಆಯ್ಕೆ ಸಮಿತಿಯಲ್ಲಿ ಸದಸ್ಯೆಯಾಗಿ ಕಾರ್ಯನಿರ್ವಹಿಸುವುದರಿಂದ, ಈ ಭಾಗದ ಸಾಹಿತ್ಯಿಕ ವೈವಿಧ್ಯತೆ ಹಾಗೂ ಪ್ರತಿಭಾವಂತ ಸಾಹಿತಿಗಳ ಕೃತಿಗಳಿಗೆ ಸೂಕ್ತ ಪ್ರಾತಿನಿಧ್ಯ ದೊರೆಯುವ ನಿರೀಕ್ಷೆಯಿದೆ.

ಇಂತಹ ಮಹತ್ವದ ಜವಾಬ್ದಾರಿ ನೀಡಿರುವುದು ಕಲ್ಯಾಣ ಕರ್ನಾಟಕದ ಸಾಹಿತ್ಯ ವಲಯಕ್ಕೆ ಹೆಮ್ಮೆಯ ಸಂಗತಿಯಾಗಿದ್ದು, ಡಾ. ಮಂಜುಶ್ರೀ ಎಂ. ಕಡಕೋಳ ಅವರಿಗೆ ಸಾಹಿತಿಗಳು, ಪತ್ರಕರ್ತರು ಅಭಿನಂದನೆ ಸಲ್ಲಿಸಿ, ಅವರ ಮುಂದಿನ ಸಾಹಿತ್ಯಕ ಹಾಗೂ ಶೈಕ್ಷಣಿಕ ಕಾರ್ಯಗಳಿಗೆ ಶುಭ ಹಾರೈಸಿದ್ದಾರೆ.