ಉತ್ತರ ಕ್ಷೇತ್ರದ ಅಭಿವೃದ್ಧಿಗೆ ಶಾಸಕರು ಹೆಚ್ಚಿನ ಗಮನಹರಿಸಲಿ: ಶಿವಾನಂದ ಪಿಸ್ತಿ

ಉತ್ತರ ಕ್ಷೇತ್ರದ ಅಭಿವೃದ್ಧಿಗೆ ಶಾಸಕರು ಹೆಚ್ಚಿನ ಗಮನಹರಿಸಲಿ: ಶಿವಾನಂದ ಪಿಸ್ತಿ

ಉತ್ತರ ಕ್ಷೇತ್ರದ ಅಭಿವೃದ್ಧಿಗೆ ಶಾಸಕರು ಹೆಚ್ಚಿನ ಗಮನಹರಿಸಲಿ: ಶಿವಾನಂದ ಪಿಸ್ತಿ

ಕಲಬುರಗಿ: ಉತ್ತರ ಮತಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಶಾಸಕರು ಹೆಚ್ಚಿನ ಆದ್ಯತೆ ನೀಡಿ, ಕ್ಷೇತ್ರದ ಜನರು ಎದುರಿಸುತ್ತಿರುವ ಮೂಲಭೂತ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ಮಹಾನಗರ ಪಾಲಿಕೆಯ ಮಾಜಿ ಮಹಾಪೌರ ಶಿವಾನಂದ ಪಿಸ್ತಿ ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ಕಳೆದರೂ ಉತ್ತರ ಮತಕ್ಷೇತ್ರದಲ್ಲಿ ಕುಡಿಯುವ ನೀರು, ರಸ್ತೆ ಅಭಿವೃದ್ಧಿ ಸೇರಿದಂತೆ ಹಲವು ಮೂಲಭೂತ ಸೌಕರ್ಯಗಳ ಸಮಸ್ಯೆಗಳಿಗೆ ಸಮರ್ಪಕ ಪರಿಹಾರ ದೊರೆತಿಲ್ಲ. ಇದರಿಂದ ಕ್ಷೇತ್ರದ ಜನರಲ್ಲಿ ಅಸಮಾಧಾನ ಮೂಡಿದೆ ಎಂದು ಅವರು ಆರೋಪಿಸಿದ್ದಾರೆ.

ಕಲಬುರಗಿ ನಗರದ ವಿವಿಧ ಬಡಾವಣೆಗಳಲ್ಲಿರುವ ಹಾಳಾದ ರಸ್ತೆಗಳು ಹಾಗೂ ಗುಂಡಿಗಳನ್ನು ಕೂಡಲೇ ಮುಚ್ಚಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಶಾಸಕರು ಕ್ಷೇತ್ರದ ಎಲ್ಲ ವಾರ್ಡ್‌ಗಳಿಗೆ ಖುದ್ದಾಗಿ ಭೇಟಿ ನೀಡಿ, ಸ್ಥಳೀಯ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಜನಪ್ರತಿನಿಧಿಯಾಗಿ ಕ್ಷೇತ್ರದ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ನೀಡುವುದು ಶಾಸಕರ ಜವಾಬ್ದಾರಿಯಾಗಿದೆ. ಆದ್ದರಿಂದ ಕುಡಿಯುವ ನೀರು, ರಸ್ತೆ ಸೇರಿದಂತೆ ಮೂಲಭೂತ ಸೌಕರ್ಯಗಳ ಸಮಸ್ಯೆಗಳನ್ನು ಶೀಘ್ರ ಪರಿಹರಿಸಿ, ಅಗತ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಬೇಕು ಎಂದು ಶಿವಾನಂದ ಪಿಸ್ತಿ ತಿಳಿಸಿದ್ದಾರೆ.

ಅಭಿವೃದ್ಧಿ ಕಾರ್ಯಗಳಿಗೆ ಶೀಘ್ರವೇ ಚಾಲನೆ ನೀಡದಿದ್ದರೆ, ಮುಂದಿನ ದಿನಗಳಲ್ಲಿ ಸಾರ್ವಜನಿಕರನ್ನು ಒಗ್ಗೂಡಿಸಿಕೊಂಡು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.