ಸ್ವಾಸ್ತ್ಯ ಸಮಾಜದ ಸಂಕಲ್ಪವೇ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘದ ಮುಖ್ಯ ಉದ್ದೇಶ - ವಿವೇಕ್
ಸ್ವಾಸ್ತ್ಯ ಸಮಾಜದ ಸಂಕಲ್ಪವೇ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘದ ಮುಖ್ಯ ಉದ್ದೇಶ - ವಿವೇಕ್
ಕಲಬುರಗಿ : ದುಶ್ಚಟಗಳ ವಿರುದ್ಧ ಜಾಗೃತಿ ಮೂಡಿಸಿ,ಯುವ ಸಮುದಾಯಕ್ಕೆ ಅದರ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ ಸಂಪೂರ್ಣ ಸಮಾಜದ ಸ್ವಾಸ್ತ್ಯ
ಸಂಕಲ್ಪವೇ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘದ ಮುಖ್ಯ ಉದ್ದೇಶವಾಗಿದೆ ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿನ್ಸೆಂಟ್ ಪಾಯಸ್ ರವರು ಹೇಳಿದರು.
ನಗರದ ಕೇಂದ್ರೀಯ ಬಸ್ ನಿಲ್ದಾಣದ ಹಿಂಭಾಗದಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಮಳೆಗೆ ಸಭಾಂಗಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಷೇಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಹಾಗೂ ಕರ್ನಾಟಕ ಜನಜಾಗೃತಿ ವೇದಿಕೆಯ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿರುವ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಒಂದು ದಿನದ ತರಬೇತಿ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ ಒಳ್ಳೆಯ ಹವ್ಯಾಸಗಳನ್ನು ರೂಡಿಸಿಕೊಳ್ಳುವಂತೆ ತಿಳಿ ಹೇಳುವುದು ಸಂಪನ್ಮೂಲ ವ್ಯಕ್ತಿಗಳ ಆದ್ಯ ಕರ್ತವ್ಯವಾಗಿದೆ ಎಂದು ಕಿವಿಮಾತು ಹೇಳಿದರು.
ಇಂದಿನ ಪ್ರಸ್ತುತ ಯುಗದಲ್ಲಿ ಸುಮಾರು ಯುವ ವಿದ್ಯಾರ್ಥಿಗಳು ಮಾದಕ ವಸ್ತುಗಳಿಗೆ ಬಲಿಯಾಗಿ ಸಮಾಜವನ್ನು ಹಾಳುಗೆಡುತ್ತಿದ್ದಾರೆ,2050 ವರೆಗೆ ಇದೇ ರೀತಿ ಮುಂದುವರೆದರೆ ನಮ್ಮ ವಿರುದ್ಧ ಯಾವ ದೇಶವು ಯುದ್ಧ ಮಾಡುವ ಅವಶ್ಯಕತೆ ಇಲ್ಲ, ಅಂಥಹ ಕೆಟ್ಟ ಪರಿಸ್ಥಿತಿಗೆ ನಮ್ಮ ದೇಶ ತಲಪುತ್ತದೆ ಎಂದು ಆತಂಕ ವ್ಯಕ್ತಪಡಿಸಿ ಮಾತನಾಡಿದರು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಕಲಬುರಗಿ ಜಿಲ್ಲಾಧ್ಯಕ್ಷರಾದ ಸಿ.ಎನ್.ಬಾಬಳಗಾವ್ ಮಾತನಾಡಿ ಸಮಾಜದ ಸ್ವಾಸ್ತ್ಯ ಕಾಪಾಡುವುದರ ಜೊತೆಗೆ ವಿದ್ಯಾರ್ಥಿಗಳಿಗೆ ಹಾಗೂ ಯುವ ಸಮೂಹಕ್ಕೆ ಆರೋಗ್ಯಕರ ಜೀವನ ನಡೆಸುವ ಹಲವು ಸೂತ್ರಗಳ ಮಹತ್ವದ ಸಂಕಲ್ಪ ಕಾರ್ಯಕ್ರಮ ಇದಾಗಿದೆ ಎಂದು ಹೇಳಿದರು.
ಈ ಸಮಾರಂಭದ ವೇದಿಕೆಯ ಮೇಲೆ ಕಲ್ಬುರ್ಗಿಯ ಪ್ರಾದೇಶಿಕ ನಿರ್ದೇಶಕರಾದ ದಿನೇಶ್ ಪೂಜಾರಿ,ಬೀದರ ಜಿಲ್ಲಾ ನಿರ್ದೇಶಕರಾದ ಮುರಳಿಧರ್, ಯಾದಗಿರಿ ಜಿಲ್ಲಾ ನಿರ್ದೇಶಕರಾದ ವಸಂತಗೌಡ, ವಿಜಯಪುರ ಜಿಲ್ಲಾ ನಿರ್ದೇಶಕರಾದ ಮೋಹನ್ ನಾಯ್ಕ್,ಕಲಬುರ್ಗಿ ಜಿಲ್ಲಾ ನಿರ್ದೇಶಕರಾದ ಗಣಪತಿ ಮುಳಂಜಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಈ ಕಾರ್ಯಗಾರದಲ್ಲಿ ನಾಲ್ಕು ಜಿಲ್ಲೆಗಳಾದ ಬೀದರ,ಕಲಬುರ್ಗಿ, ಬಿಜಾಪುರ,ಯಾದಗಿರಿ ಜಿಲ್ಲೆಯ ಸುಮಾರು 50ಕ್ಕೂ ಹೆಚ್ಚು ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿದ್ದರು,ಈ ಕಾರ್ಯಕ್ರಮವನ್ನು ಕಲ್ಬುರ್ಗಿ ವಿಭಾಗದ ಜನಜಾಗೃತಿ ಯೋಜನೆ ಅಧಿಕಾರಿ ರಾಜೇಶ್ ಕೆ ನಿರೂಪಿಸಿ ವಂದಿಸಿದರು.

