ಆದರ್ಶ ಶಿಕ್ಷಣ ಸಂಸ್ಥೆಯಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ
ಆದರ್ಶ ಶಿಕ್ಷಣ ಸಂಸ್ಥೆಯಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ
ಕಲಬುರಗಿ: ಆದರ್ಶ ಶಿಕ್ಷಣ ಸಂಸ್ಥೆಯ ಆದರ್ಶ ಸ್ವತಂತ್ರ ಪದವಿ ಪೂರ್ವ ಕಲಾ ಹಾಗೂ ವಾಣಿಜ್ಯ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲಾಯಿತು.
ಕಾರ್ಯಕ್ರಮವನ್ನು ಮಲ್ಲಿಕಾರ್ಜುನ ಖರ್ಗೆ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಶ್ರೀ ಬಿ.ಎಸ್. ಮಾಲಿ ಪಾಟೀಲ್ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಚನ್ನವೀರ ವೀರ ತಪಸ್ವಿ ಶಿವಾಚಾರ್ಯ ಪ್ರೌಢಶಾಲೆಯ ಮುಖ್ಯ ಗುರುಗಳಾದ ಶ್ರೀ ಶಿವರಾಜ್ ನಾಯಕ್ ಮಾತನಾಡಿದರು.
ಆದರ್ಶ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಶ್ರೀ ಪ್ರಮೋದ್ ನಾಗೂರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಗುಂಡುರಾವ್ ಅಗ್ನಿಹೋತ್ರ, ಪ್ರಾಚಾರ್ಯರು, ವಹಿಸಿದ್ದರು.
ಈ ಸಂದರ್ಭದಲ್ಲಿ ಉಪನ್ಯಾಸಕರಾದ ಶ್ರೀ ರಾಮಣ್ಣ ಮೇದಾ ಹಾಗೂ ಶ್ರೀಮತಿ ಭಾಗ್ಯಶ್ರೀ ಮಠಪತಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ಶಿಕ್ಷಣದ ಮಹತ್ವ, ಶಿಸ್ತು ಹಾಗೂ ಉತ್ತಮ ಭವಿಷ್ಯ ರೂಪಿಸಿಕೊಳ್ಳುವ ಕುರಿತು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿ-ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ಕುಮಾರಿ ಅಂಬಿಕಾ ಕಾರ್ಯಕ್ರಮ ನಿರೂಪಿಸಿದರು. ಕುಮಾರಿ ಚಂದ್ರಿಕಾ ಮತ್ತು ಸಂಗಡಿಗರು ಪ್ರಾರ್ಥನಾ ಗೀತೆ ಹಾಡಿದರು. ಕುಮಾರಿ ಸುಮ ಸ್ವಾಗತ ಭಾಷಣ ಮಾಡಿದರು. ಕುಮಾರಿ ಯಲ್ಲಮ್ಮ ವಂದನಾರ್ಪಣೆ ಸಲ್ಲಿಸಿದರು.

