ಮುಡಾ ಅರ್ಜಿ ವಿಚಾರಣೆ ಮತ್ತೆ ಮುಂದೂಡಿದ ಹೈಕೋರ್ಟ್
ಮುಡಾ ಅರ್ಜಿ ವಿಚಾರಣೆ ಮತ್ತೆ ಮುಂದೂಡಿದ ಹೈಕೋರ್ಟ್
ಮುಡಾ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ಸೆಪ್ಟೆಂಬರ್ 12ಕ್ಕೆ ಮುಂದೂಡಿದೆ.
ಇಂದು ಮುಡಾ ಪ್ರಕರಣದ ಅರ್ಜಿ ವಿಚಾರಣೆ ವಾದ ಮಂಡಿಸಿದ ಅಡ್ವೊಕೇಟ್ ಜನರಲ್ ಕೆ ಶಶಿಕಿರಣ್ ಶೆಟ್ಟಿಯವರು “ಲೋಕಾಯುಕ್ತರಿಗೆ ದೂರು ನೀಡಿದ ಬಳಿಕ ನಿರ್ದಿಷ್ಟ ಕಾಲದವರಗೆ ದೂರುದಾರರು ಕಾಯ್ದಿಲ್ಲ. ತಕ್ಷಣ ಅವರು ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17ಎ ಅಡಿ ರಾಜ್ಯಪಾಲರಿಂದ ಪೂರ್ವಾನುಮತಿ ಕೋರಿದ್ದಾರೆ” ಎಂದು ಹೇಳಿದರು.
ದೂರುದಾರ ಸ್ನೇಹಮಯಿ ಕೃಷ್ಣ ಪರವಾಗಿ ವಾದ ಮಂಡಿಸಿದ ವಕೀಲೆ ಲಕ್ಷ್ಮಿ ಐಯ್ಯಂಗಾರ್ ಅವರು, ಅರ್ಜಿದಾರರ ಸೂಚನೆಯಂತೆ ಇಡೀ ಪ್ರಕ್ರಿಯೆ ನಡೆದಿದೆ ಎಂದು ಸಿಎಂ ಅಧಿಕಾರವಧಿಯ ಇಸವಿಗಳನ್ನು ಉಲ್ಲೇಖಿಸಿ ವಿವರಿಸಿದರು.
ಏನೇ ಇದ್ದರೂ ಸೆಪ್ಟೆಂಬರ್ 12ರಂದೇ ವಾದ ಮಂಡಿಸಿ ಕೊನೆಗೊಳಿಸಬೇಕು ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ತಿಳಿಸಿದ್ದಾರೆ.
ವರದಿಗಳ ಪ್ರಕಾರ, ಪ್ರತಿವಾದಿಗಳ ವಾದ ಪೂರ್ಣಗೊಂಡಿದ್ದು, ಅರ್ಜಿದಾರರ ಪರವಾಗಿ ಹಿರಿಯ ವಕೀಲ ಡಾ. ಅಭಿಷೇಕ್ ಮನು ಸಿಂಘ್ವಿ ಮತ್ತು ಪ್ರೊ. ರವಿವರ್ಮ ಕುಮಾರ್ ಅವರು .ಸೆಪ್ಟೆಂಬರ್ 12ರಂದು ಮಧ್ಯಾಹ್ನ 12 ಗಂಟೆಗೆ ವಾದಿಸಿದ್ದಾರೆ.
ಕೃಪೆ : ಗೌರಿ.ಕಾಂ