ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ

ಕಲಬುರಗಿ :ಪಾಳಾ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಳಾದಲ್ಲಿ ಅರ್ಥಪೂರ್ಣವಾಗಿ ಜರುಗಿತು.

ಇಂದು 15 ಶಾಲೆಗಳಿಂದ ಮಕ್ಕಳು ಹಲವು ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿಯಾದ ವಿಜಯಕುಮಾರ್ ಜಮಖಂಡಿ ಮಾತನಾಡಿ ಗಣ್ಯರು ನಮ್ಮಲ್ಲಿ ಪ್ರತಿಭೆಗಳಿಗೆ ಕೊರತೆ ಇಲ್ಲ, ಸೂಕ್ತ ವೇದಿಕೆಯನ್ನು ಒದಗಿಸಿ ಪ್ರತಿಭೆಯನ್ನು ಹೊರ ತೆಗೆಯುವಂತೆ ಪ್ರಾಮಾಣಿಕ ಪ್ರಯತ್ನವಾಗಬೇಕು. ಪ್ರತಿಭೆ ಎನ್ನುವುದು ಯಾರ ಸ್ವತ್ತು ಅಲ್ಲ, ಇಂದು ಇಲ್ಲಿ ಭಾಗವಹಿಸಿರುವ ಮಕ್ಕಳು ರಾಜ್ಯ ಹಂತದಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸುವಂತೆ ಆಗಬೇಕು ಎಂದು ಎಲ್ಲ ಮಕ್ಕಳಿಗೂ ಶುಭ ಹಾರೈಸಿದರು.

ಈ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದ ಸರ್ವರಿಗೂ ಧನ್ಯವಾದ ಅರ್ಪಿಸಿದರು. ನಂತರ ಮಧ್ಯಾಹ್ನ ಅವಧಿಯಲ್ಲಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ವಿಜೇತ ಮಕ್ಕಳಿಗೆ ಪ್ರಶಸ್ತಿ ಪತ್ರಗಳು ಹಾಗೂ ನೆನಪಿನ ಕಾಣಿಕೆಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಗುರುಗಳು, ಶಿಕ್ಷಕರು,ಕ್ಷೇತ್ರ ಶಿಕ್ಷಣಾಧಿಕಾರಿಯಾದ ವಿಜಯಕುಮಾರ್ ಜಮಖಂಡಿ, ನೌಕರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಮುಖಂಡರು, ಎಸ್ ಡಿ ಎಂ ಸಿ ಅಧ್ಯಕ್ಷರು, ಸದಸ್ಯರು, ಶಾಲೆಯ ಮಕ್ಕಳು ಮತ್ತು ಹಳೆಯ ವಿದ್ಯಾರ್ಥಿಗಳು ಹಾಗೂ ವಿವಿಧ ಶಾಲೆಗಳ ಮುಖ್ಯ ಗುರುಗಳು, ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಗೀತಾ ಭರಣಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ವರದಿ ಕಾಶಿಬಾಯಿ ಸಿ ಗುತ್ತೇದಾರ