ಶಾಸಕರ ಅಧ್ಯಕ್ಷತೆಯಲ್ಲಿ ಪ್ರಜಾ ಸೇವಾ ಅಭಿಯಾನ ಕಾರ್ಯಕ್ರಮ : ಸಾರ್ವಜನಿಕರು ಸದುಪಯೋಗ ಪಡೆಯಲು ತಹಸೀಲ್ದಾರ್ ಸುಬ್ಬಣ್ಣ ಮನವಿ
ಶಾಸಕರ ಅಧ್ಯಕ್ಷತೆಯಲ್ಲಿ ಪ್ರಜಾ ಸೇವಾ ಅಭಿಯಾನ ಕಾರ್ಯಕ್ರಮ : ಸಾರ್ವಜನಿಕರು ಸದುಪಯೋಗ ಪಡೆಯಲು ತಹಸೀಲ್ದಾರ್ ಸುಬ್ಬಣ್ಣ ಮನವಿ
ಚಿಂಚೋಳಿ : ಬೆಂಗಳೂರು ಪ್ರಜಾಸೇವಾ ಇಲಾಖೆಯ ಉಪ ಕಾರ್ಯದರ್ಶಿಗಳ ಸುತ್ತೋಲೆಯಂತೆ ಪ್ರತಿ ತಿಂಗಳು ಶನಿವಾರ ಶಾಸಕ ಡಾ. ಅವಿನಾಶ ಜಾಧವ ಅವರ ಅಧ್ಯಕ್ಷತೆಯಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ಸಭೆ ಚಿಂಚೋಳಿ ಡಾ. ಬಿ. ಆರ್.ಅಂಬೇಡ್ಕರ್ ಭವನದಲ್ಲಿ ನಡೆಸಲಾಗುತ್ತಿದೆ ಎಂದು ತಹಸೀಲ್ದಾರ ಸುಬ್ಬಣ್ಣ ಜಮಖಂಡಿ ತಿಳಿಸಿದ್ದಾರೆ.
ಸರಕಾರದ ಸುತ್ತೋಲೆಯ ಮಾರ್ಗ ಸೂಚಿಗಳಂತೆ ಪ್ರಜಾ ಸೇವಾ ಅಭಿಯಾನ ಸಭೆಗಳು ರಾಜ್ಯಾದ್ಯಾಂತ ನಡೆಯಲಿದೆ. ಜಿಲ್ಲಾ ಕೇಂದ್ರದಲ್ಲಿ ಉಸ್ತುವಾರಿ ಸಚಿವರು ಮತ್ತು ಸ್ಥಳಿಯ ಶಾಸಕರ ನೇತೃತ್ವದಲ್ಲಿ ನಡೆಸಲಾಗುತ್ತದೆ. ಈ ಹಿನ್ನಲೆಯಲ್ಲಿ ಚಿಂಚೋಳಿ ತಾಲೂಕ ಕೇಂದ್ರದಲ್ಲಿ ಶಾಸಕ ಡಾ. ಅವಿನಾಶ ಜಾಧವ ಅವರ ಅಧ್ಯಕ್ಷತೆಯಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕರಿಸುವ ಪ್ರಜಾ ಸೇವಾ ಅಭಿಯಾನ ಸಭೆ ನಡೆಯಲಿದೆ. ಸಭೆಯಲ್ಲಿ ಬಂದ ಸಮಸ್ಯೆಗಳ ಅಹವಾಲುಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಿ ನೀಡುವುದು ಪ್ರಜಾ ಸೇವಾ ಅಭಿಯಾನದ ಮೂಲ ಉದ್ದೇಶ ಆಗಿದೆ. ಹೀಗಾಗಿ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ
2026 ಸೆಪ್ಟೆಂಬರ 5 ಶನಿವಾರ ಬೆಳಿಗ್ಗೆ 11 ಗಂಟೆಯಿಂದ 3 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿರುವ ಪ್ರಜಾ ಸೇವಾ ಸಭೆಯಲ್ಲಿ ತಾಲೂಕಿನ ಸಾರ್ವಜನಿಕರು ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ ಅವರು ಪ್ರಕಟಣೆ ಮೂಲಕ ಕೋರಿದ್ದಾರೆ.

