ಬರ ಘೋಷಣೆ, ಪರಿಹಾರಕ್ಕೆ ಆಗ್ರಹಿಸಿ ಬಿಜೆಪಿ ಬೃಹತ್ ಪ್ರತಿಭಟನೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ; ರೈತರ ಹಿತ ಕಾಪಾಡುವಂತೆ ಒತ್ತಾಯ

ಬರ ಘೋಷಣೆ, ಪರಿಹಾರಕ್ಕೆ ಆಗ್ರಹಿಸಿ ಬಿಜೆಪಿ ಬೃಹತ್ ಪ್ರತಿಭಟನೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ; ರೈತರ ಹಿತ ಕಾಪಾಡುವಂತೆ ಒತ್ತಾಯ

ಬರ ಘೋಷಣೆ, ಪರಿಹಾರಕ್ಕೆ ಆಗ್ರಹಿಸಿ ಬಿಜೆಪಿ ಬೃಹತ್ ಪ್ರತಿಭಟನೆ

ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ; ರೈತರ ಹಿತ ಕಾಪಾಡುವಂತೆ ಒತ್ತಾಯ

ಕಲಬುರಗಿ : ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡದೆ, ಸಂಕಷ್ಟದಲ್ಲಿರುವ ರೈತರಿಗೆ ಸಮರ್ಪಕ ಬರ ಪರಿಹಾರ ನೀಡಲು ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಲಬುರಗಿ ಜಿಲ್ಲಾ ಘಟಕದ ವತಿಯಿಂದ ಬುಧವಾರ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬರದ ಪರಿಣಾಮ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ಕೂಡಲೇ ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ಅಗತ್ಯ ಪರಿಹಾರ ಒದಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ರೈತರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ, ಕೃಷಿ ಚಟುವಟಿಕೆಗಳಿಗೆ ಅಗತ್ಯ ನೆರವು ಹಾಗೂ ಬರ ಪರಿಸ್ಥಿತಿಯಿಂದ ಸಂಕಷ್ಟಕ್ಕೊಳಗಾದ ಕುಟುಂಬಗಳಿಗೆ ತಕ್ಷಣ ಸರ್ಕಾರ ಸ್ಪಂದಿಸಬೇಕು ಎಂದು ಬಿಜೆಪಿ ಮುಖಂಡರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಶಾಸಕ ಬಸವರಾಜ ಮತ್ತಿಮೂಡ, ಮಾಜಿ ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ರಾಜಕುಮಾರ ಪಾಟೀಲ ತೆಲ್ಕೂರ, ಬಿಜೆಪಿ ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಅಶೋಕ ಬಗಲಿ, ನಗರ ಜಿಲ್ಲಾ ಅಧ್ಯಕ್ಷ ಚಂದು ಪಾಟೀಲ, ಮುಖಂಡರಾದ ನಿತೀನ್ ಗುತ್ತೇದಾರ, ಶರಣಪ್ಪ ತಳವಾರ, ಗಿರಿರಾಜ್ ಯಳಮೇಲಿ, ರಾಘವೇಂದ್ರ ಕುಲಕರ್ಣಿ, ಡಾ. ಇಂದಿರಾ ಶಕ್ತಿ, ವಿಜಯಲಕ್ಷ್ಮೀ ಗೋಬುರಕರ್, ಡಾ. ಸುಧಾ ಹಾಲಕಾಯಿ, ಅವಿನಾಶ ಮಾಕೇರಿ, ಸದ್ಧಾಂ ವಜೀರಗಾಂವ್, ವಿಶಾಲ ಧರ್ಗಿ, ಅರುಣಕುಮಾರ ಪಾಟೀಲ, ಸಂತೋಷ ಹಾದಿಮನಿ, ನಾಗರಾಜ ಮಹಾಗಾಂವಕರ್, ಶ್ರೀನಿವಾಸ ದೇಸಾಯಿ, ರವಿಚಂದ್ರ ಕಾಂತಿಕರ್ ಸೇರಿದಂತೆ ಪಕ್ಷದ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.