ಕೇಂದ್ರೀಯ ಹಿಂದಿ ನಿರ್ದೇಶಾಲಯದ ಸರ್ಟಿಫಿಕೇಟ್ ಕೋರ್ಸ್ ಫಲಿತಾಂಶ ಪ್ರಕಟ ಶ್ರೀಮತಿ ವೀರಮ್ಮ ಗಂಗಸಿರಿ ಕಾಲೇಜಿಗೆ ಶೇ.99ರಷ್ಟು ಫಲಿತಾಂಶ; 53 ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್
ಕೇಂದ್ರೀಯ ಹಿಂದಿ ನಿರ್ದೇಶಾಲಯದ ಸರ್ಟಿಫಿಕೇಟ್ ಕೋರ್ಸ್ ಫಲಿತಾಂಶ ಪ್ರಕಟ
ಶ್ರೀಮತಿ ವೀರಮ್ಮ ಗಂಗಸಿರಿ ಕಾಲೇಜಿಗೆ ಶೇ.99ರಷ್ಟು ಫಲಿತಾಂಶ; 53 ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್
ಕಲಬುರಗಿ : ನಗರದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಹಿಂದಿ ವಿಭಾಗ ಹಾಗೂ ಹೊಸದಿಲ್ಲಿಯ ಕೇಂದ್ರೀಯ ಹಿಂದಿ ನಿರ್ದೇಶಾಲಯದ ಸಹಯೋಗದಲ್ಲಿ ಮೇ 31, 2026ರಂದು ದೇಶಾದ್ಯಂತ ನಡೆದ ಸರ್ಟಿಫಿಕೇಟ್ ಕೋರ್ಸ್ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಮಹಾವಿದ್ಯಾಲಯದ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ಮಹಾವಿದ್ಯಾಲಯದ ಪರೀಕ್ಷಾ ಕೇಂದ್ರದಿಂದ ಪರೀಕ್ಷೆ ಬರೆದ ಒಟ್ಟು 102 ವಿದ್ಯಾರ್ಥಿಗಳ ಪೈಕಿ 101 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.99ರಷ್ಟು ಫಲಿತಾಂಶ ದಾಖಲಾಗಿದೆ. ಇವರಲ್ಲಿ 53 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 43 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 4 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಹಾಗೂ ಒಬ್ಬ ವಿದ್ಯಾರ್ಥಿ ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಈ ಪರೀಕ್ಷಾ ಕೇಂದ್ರದಲ್ಲಿ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯ, ಕೆ.ಬಿ.ಎನ್. ವಿಶ್ವವಿದ್ಯಾಲಯ ಹಾಗೂ ಎನ್.ವಿ. ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವಿದ್ಯಾರ್ಥಿಗಳ ಈ ಸಾಧನೆಗೆ ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಶಿಲ್ ಜಿ. ನಮೋಶಿ, ಉಪಾಧ್ಯಕ್ಷ ರಾಜಾ ಬಿ. ಭೀಮಳ್ಳಿ, ಕಾರ್ಯದರ್ಶಿ ಉದಯಕುಮಾರ್ ಚಿಂಚೋಳಿ, ಜಂಟಿ ಕಾರ್ಯದರ್ಶಿ ಡಾ. ಕೈಲಾಸ್ ಪಾಟೀಲ್, ಕಾಲೇಜು ಅಭಿವೃದ್ಧಿ ಸಮಿತಿ ಸಂಚಾಲಕ ನಾಗಣ್ಣ ಘಂಟಿ, ಸದಸ್ಯರಾದ ಅರುಣ್ ಕುಮಾರ್ ಪಾಟೀಲ್ ಹಾಗೂ ಅನಿಲಕುಮಾರ್ ಮರಗೋಳ, ಆಡಳಿತ ಮಂಡಳಿ ಸದಸ್ಯರು, ಪ್ರಾಚಾರ್ಯ ಪ್ರೊ. ಆರ್.ಬಿ. ಕೊಂಡಾ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.
ಫಲಿತಾಂಶದ ವಿವರಗಳನ್ನು ಮಹಾವಿದ್ಯಾಲಯದ ಹಿಂದಿ ವಿಭಾಗದ ಮುಖ್ಯಸ್ಥರಾದ ಡಾ. ಪ್ರೇಮಚಂದ ಚವ್ಹಾಣ ಅವರು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

