ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150 ಕ್ಷೇತ್ರಗಳಲ್ಲಿ ಸ್ಪರ್ಧೆ: ಆರ್‌ಎಸ್‌ಪಿ ಗುರಿ

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150 ಕ್ಷೇತ್ರಗಳಲ್ಲಿ ಸ್ಪರ್ಧೆ: ಆರ್‌ಎಸ್‌ಪಿ ಗುರಿ

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150 ಕ್ಷೇತ್ರಗಳಲ್ಲಿ ಸ್ಪರ್ಧೆ: ಆರ್‌ಎಸ್‌ಪಿ ಗುರಿ

ಕನಿಷ್ಠ 10 ಸ್ಥಾನ ಗೆಲ್ಲುವ ಸಂಕಲ್ಪ; ಸಂಸ್ಥಾಪನಾ ದಿನಾಚರಣೆಯಲ್ಲಿ ಶಿವಲಿಂಗಪ್ಪ ಕಿನ್ನೂರ್ ಘೋಷಣೆ

ಕಲಬುರಗಿ : ರಾಷ್ಟ್ರೀಯ ಸಮಾಜ ಪಕ್ಷ (ಆರ್‌ಎಸ್‌ಪಿ) ಮುಂದಿನ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ 224 ಕ್ಷೇತ್ರಗಳ ಪೈಕಿ ಕನಿಷ್ಠ 150 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ, ಕನಿಷ್ಠ 10 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಗುರಿ ಹೊಂದಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಶಿವಲಿಂಗಪ್ಪ ಕಿನ್ನೂರ್ ತಿಳಿಸಿದರು.

ಬೆಂಗಳೂರು ನಗರದ ಗಾಂಧಿಭವನದಲ್ಲಿ ಶನಿವಾರ ನಡೆದ ಆರ್‌ಎಸ್‌ಪಿಯ 23ನೇ ಸಂಸ್ಥಾಪನಾ ದಿನಾಚರಣೆ ಹಾಗೂ ರಾಜ್ಯಮಟ್ಟದ ಕಾರ್ಯಕರ್ತರು ಮತ್ತು ಪದಾಧಿಕಾರಿಗಳ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಆರ್‌ಎಸ್‌ಪಿ ದೇಶದ 17ಕ್ಕೂ ಹೆಚ್ಚು ರಾಜ್ಯಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, ಬಲವಾದ ಸಂಘಟನಾ ಜಾಲ ಹೊಂದಿದೆ. ಮಹಾರಾಷ್ಟ್ರ ಮತ್ತು ಗುಜರಾತ್‌ನಲ್ಲಿ ಪಕ್ಷದ ಶಾಸಕರು ಹಾಗೂ ಕಾರ್ಪೊರೇಟರ್‌ಗಳು ಆಯ್ಕೆಯಾಗಿರುವುದು ಪಕ್ಷದ ರಾಜಕೀಯ ಪ್ರಭಾವಕ್ಕೆ ಸಾಕ್ಷಿಯಾಗಿದೆ ಎಂದರು.

ಕರ್ನಾಟಕದಲ್ಲಿ ಪಕ್ಷದ ಸಂಘಟನೆಯನ್ನು ಮುಂದಿನ ದಿನಗಳಲ್ಲಿ ಮತ್ತಷ್ಟು ಬಲಪಡಿಸಲಾಗುವುದು. ಮುಂಬರುವ ಜಿಬಿಎ, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಮೂಲಕ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಲಾಗುವುದು ಎಂದು ಹೇಳಿದರು.

ಸಮಾವೇಶದ ಸಂದರ್ಭದಲ್ಲಿ ಹಲವು ಯುವಕರು ಹಾಗೂ ಮಹಿಳೆಯರು ಆರ್‌ಎಸ್‌ಪಿ ಸೇರ್ಪಡೆಯಾದರು.

ಮಾಜಿ ರಾಷ್ಟ್ರೀಯ ಅಧ್ಯಕ್ಷ ಸಿದ್ದಪ್ಪ ಲಕ್ಷಣ ಅಕ್ಕಿಸಾಗರ್, ರಾಷ್ಟ್ರೀಯ ಕಾರ್ಯದರ್ಶಿ ಗೋವಿಂದರಾಮ್ ಸುರ್ನಾರ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶರಣಬಸಪ್ಪ ದೊಡ್ಡಮನಿ, ರಾಜ್ಯ ಉಸ್ತುವಾರಿ ಶಿವಲಿಂಗಪ್ಪ ಜೋಗಿನ್, ಯುವ ಘಟಕದ ರಾಜ್ಯಾಧ್ಯಕ್ಷ ದೇವೇಂದ್ರ ಕ್ಯಾಚಪ್ಪಳ್ಳಿ, ಜಿಲ್ಲಾಧ್ಯಕ್ಷ ಶ್ರೀಮಂತ ಮಾವನೂರ್, ಸುನಿಲ್ ಕಿನ್ನೂರ್, ಮಾಂತು ಅವರಾದ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.