ಯಾದಗಿರಿ ಬಂದ್‌ಗೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿ: ಮಲ್ಲಿಕಾರ್ಜುನ್ ಸೈದಾಪೋಳ್ ಮನವಿ

ಯಾದಗಿರಿ ಬಂದ್‌ಗೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿ: ಮಲ್ಲಿಕಾರ್ಜುನ್ ಸೈದಾಪೋಳ್ ಮನವಿ

ಯಾದಗಿರಿ ಬಂದ್‌ಗೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿ: ಮಲ್ಲಿಕಾರ್ಜುನ್ ಸೈದಾಪೋಳ್ ಮನವಿ

ಗುರುಮಿಠಕಲ್: ಯಾದಗಿರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸುವಂತೆ ಒತ್ತಾಯಿಸಿ ಸೆಪ್ಟೆಂಬರ್ 7ರಂದು ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಯಾದಗಿರಿ ಬಂದ್ ಹಾಗೂ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಜಿಲ್ಲೆಯ ರೈತರ ಸಂಕಷ್ಟವನ್ನು ಸರ್ಕಾರದ ಗಮನಕ್ಕೆ ತಂದು, ಬರಪೀಡಿತ ಜಿಲ್ಲೆ ಎಂದು ಘೋಷಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರುವ ಉದ್ದೇಶದಿಂದ ನಡೆಯಲಿರುವ ಪ್ರತಿಭಟನೆಯಲ್ಲಿ ಜಿಲ್ಲೆಯ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಗುರುಮಿಠಕಲ್ ತಾಲೂಕು ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್ ಸೈದಾಪೋಳ್ ಮನವಿ ಮಾಡಿದ್ದಾರೆ.

ರೈತರು ತಮ್ಮ ಸಂಘಟನೆಯ ಶಾಲು ಧರಿಸಿ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡು ಹೋರಾಟಕ್ಕೆ ಬೆಂಬಲ ನೀಡಬೇಕು. ಒಗ್ಗಟ್ಟಿನಿಂದ ಹೋರಾಟ ನಡೆಸುವ ಮೂಲಕ ಜಿಲ್ಲೆಯ ರೈತರಿಗೆ ನ್ಯಾಯ ದೊರಕಿಸಲು ಹಾಗೂ ಯಾದಗಿರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರದ ಮೇಲೆ ಹೆಚ್ಚಿನ ಒತ್ತಡ ತರಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.

ಜೈ ಜವಾನ್, ಜೈ ಕಿಸಾನ್.