ಕಮಲಾಪುರ ಉಪ ಮಾರುಕಟ್ಟೆ ಪ್ರಾಂಗಣ ಅಭಿವೃದ್ಧಿಗೆ: ರಾಜಕುಮಾರ ಕೋಟಿ ಮನವಿ
ಕಮಲಾಪುರ ಉಪ ಮಾರುಕಟ್ಟೆ ಪ್ರಾಂಗಣ ಅಭಿವೃದ್ಧಿಗೆ: ರಾಜಕುಮಾರ ಕೋಟಿ ಮನವಿ
ಕಲಬುರಗಿ: ಕಲಬುರಗಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಮಲಾಪುರದಲ್ಲಿ ಆಯೋಜಿಸಲಾಗಿದ್ದ ಪ್ರಜಾ ಸೇವೆ ಕಾರ್ಯಕ್ರಮದ ಸಂದರ್ಭದಲ್ಲಿ ಗೃಹ, ಮಾಹಿತಿ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವರು ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರನ್ನು ಭೇಟಿ ಮಾಡಿ, ಕಮಲಾಪುರದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ವ್ಯಾಪ್ತಿಯಲ್ಲಿರುವ ಉಪ ಮಾರುಕಟ್ಟೆ ಪ್ರಾಂಗಣವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವಂತೆ ಮಾರುಕಟ್ಟೆ ಸಮಿತಿಯ ಮಾಜಿ ಉಪಾಧ್ಯಕ್ಷ ರಾಜಕುಮಾರ ಕೋಟಿ ಮನವಿ ಸಲ್ಲಿಸಿದರು.
ಕಮಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೈತರಿಗೆ ಕೃಷಿ ಉತ್ಪನ್ನಗಳ ಮಾರಾಟ ಮತ್ತು ಸಂಗ್ರಹಣೆಗೆ ಅನುಕೂಲವಾಗುವಂತೆ ಉಪ ಮಾರುಕಟ್ಟೆ ಪ್ರಾಂಗಣದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವುದು, ಮಾರುಕಟ್ಟೆ ಸೌಲಭ್ಯಗಳನ್ನು ಅಭಿವೃದ್ಧಿಪಡಿಸುವುದು ಹಾಗೂ ರೈತರಿಗೆ ಹೆಚ್ಚಿನ ಅನುಕೂಲ ಕಲ್ಪಿಸುವಂತೆ ಕ್ರಮ ಕೈಗೊಳ್ಳಬೇಕೆಂದು ಕಲಬುರಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಬಸವರಾಜ ಮಾಲಿ ಪಾಟೀಲ, ಹಾಪ್‌ಕಾಮ್ಸ್ ಕಲಬುರಗಿ ಹಾಗೂ ಯಾದಗಿರಿ ನಿರ್ದೇಶಕ ರಾಜಕುಮಾರ್ ಕೋಟಿ ಮನವಿಯಲ್ಲಿ ಒತ್ತಾಯಿಸಲಾಯಿತು.
ಮಾನ್ಯ ಜಿಲ್ಲಾಧಿಕಾರಿಗಳು,ಸೇರಿದಂತೆ ಕಮಲಾಪುರ ತಾಲೂಕಿನ ರೈತರು, ಸಮಾಜ ಚಿಂತಕರು ಮುಖಂಡರು ಉಪಸ್ಥಿತರಿದ್ದರು
.

