ಸತೀಶ್ ಜಾರಕಿಹೋಳಿ ವಿರುದ್ದ ಇ.ಡಿ ದಾಳಿ ಉದ್ದೇಶಪೂರ್ವಕ - ಸುಬೇದಾರ ಖಂಡನೆ
ಸತೀಶ್ ಜಾರಕಿಹೋಳಿ ವಿರುದ್ದ ಇ.ಡಿ ದಾಳಿ ಉದ್ದೇಶಪೂರ್ವಕ - ಸುಬೇದಾರ ಖಂಡನೆ
ಶಹಾಪುರ : ಸಚಿವರು ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಸತೀಶ್ ಜಾರಕಿಹೊಳಿ ಅವರ ಕುಟುಂಬಸ್ಥರು ಹಾಗೂ ಬೆಂಬಲಿಗರನ್ನು ಗುರಿಯಾಗಿಸಿಕೊಂಡು ಉದ್ದೇಶ ಪೂರ್ವಕವಾಗಿ ಇಡಿ ದಾಳಿ ನಡೆಸುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಬಸನಗೌಡ ಸುಬೇದಾರ ತೀವ್ರವಾಗಿ ಖಂಡಿಸಿದ್ದಾರೆ.
ಇತ್ತೀಚಿಗೆ ಕೇಂದ್ರ ಸರ್ಕಾರ ರಾಜಕೀಯ ದ್ವೇಷ ಸಾಧಿಸಲು ತನಿಖಾ ಸಂಸ್ಥೆಗಳನ್ನು ದುರ್ಬಳಿಕೆ ಮಾಡಿಕೊಳ್ಳುತ್ತಿದೆ ಎಂದು ತೀವ್ರ ಬೇಸರ ವ್ಯಕ್ತಪಡಿಸಿ ಮಾತನಾಡಿದರು.
ದೇಶದಲ್ಲಿ ಕಾಂಗ್ರೆಸ್ ಪರ ಜನಬೆಂಬಲ ಹೆಚ್ಚಾಗುತ್ತಿದ್ದು ಹಾಗೂ ಮುಂಬರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ಕಾಂಗ್ರೆಸ್ ನಾಯಕರನ್ನು ಕಟ್ಟಿಯಾಕುವ ರೀತಿಯಲ್ಲಿ ಅಧಿಕಾರ ದುರ್ಬಳಿಕೆ ಮಾಡಿಕೊಳ್ಳುತ್ತಿದೆ ಎಂದರು.
ತನಿಖಾ ಸಂಸ್ಥೆಗಳ ಸ್ವಾಯತ್ತೆತೆ ಹಾಗೂ ಅವುಗಳ ದುರ್ಬಳಕೆ ಕುರಿತು ನ್ಯಾಯಾಂಗದಿಂದಲೂ ಹಲವು ಬಾರಿ ಪ್ರಶ್ನೆಗಳು ಎದುರಾಗಿದ್ದರು,ಕೇಂದ್ರ ಸರ್ಕಾರ ತನ್ನ ಧೋರಣೆಯನ್ನು ಮುಂದುವರಿಸುತ್ತಿದೆ ಎಂದು ಸಮಾಧಾನ ವ್ಯಕ್ತಪಡಿಸಿದರು.

