ದಲಿತ ಸಂಘರ್ಷ ಸಮಿತಿ ಜಿಲ್ಲಾ ಅಲ್ಪಸಂಖ್ಯಾತರ ಸಂಚಾಲಕರಾಗಿ ಸೈಯದ ಅಮನ ನೇಮಕ

ದಲಿತ ಸಂಘರ್ಷ ಸಮಿತಿ ಜಿಲ್ಲಾ ಅಲ್ಪಸಂಖ್ಯಾತರ ಸಂಚಾಲಕರಾಗಿ ಸೈಯದ ಅಮನ ನೇಮಕ

ದಲಿತ ಸಂಘರ್ಷ ಸಮಿತಿ ಜಿಲ್ಲಾ ಅಲ್ಪಸಂಖ್ಯಾತರ ಸಂಚಾಲಕರಾಗಿ ಸೈಯದ ಅಮನ ನೇಮಕ

ಕಲಬುರಗಿ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ರಿ.) ನಾಗವಾರ ಬಣದ ಕಲಬುರಗಿ ಜಿಲ್ಲಾ ಅಲ್ಪಸಂಖ್ಯಾತರ ಜಿಲ್ಲಾ ಸಂಚಾಲಕರು/ಅಧ್ಯಕ್ಷರಾಗಿ ಸೈಯದ ಅಮನ ಅವರನ್ನು ನಗರದ ಜಗತ್ ವೃತ್ತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಆವರಣದಲ್ಲಿ ನೇಮಕ ಮಾಡಲಾಗಿದೆ.

ಸಂಘಟನೆಯ ಕಲಬುರಗಿ ಜಿಲ್ಲಾ ಸಂಚಾಲಕ ಬಸವರಾಜ ಟಿ. ಬಾಡಿಹಾಳ ಅವರು ನೇಮಕಾತಿ ಆದೇಶ ಪತ್ರವನ್ನು ನೀಡಿ, ಸಂಘಟನೆಯ ತತ್ವ, ಸಿದ್ಧಾಂತ ಹಾಗೂ ಬದ್ಧತೆಗಳನ್ನು ಚಾಚೂ ತಪ್ಪದೆ ಪಾಲಿಸಿಕೊಂಡು ಕಾರ್ಯನಿರ್ವಹಿಸುವಂತೆ ಸೂಚಿಸಿದ್ದಾರೆ.

ದಲಿತ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಸಾಮಾಜಿಕ ನ್ಯಾಯ, ಹಕ್ಕುಗಳು ಮತ್ತು ಸಮಸ್ಯೆಗಳ ಕುರಿತು ಧ್ವನಿ ಎತ್ತಿ, ಸಂಘರ್ಷ ಸಮಿತಿಯ ವತಿಯಿಂದ ನ್ಯಾಯ ದೊರಕಿಸಿಕೊಡುವ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಸೈಯದ ಅಮನ ಅವರು ಸಂಘಟನೆ ವಹಿಸಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಂಘಟನಾ ಸಂಚಾಲಕ ರಾಜು ಹೋಳ್ಕರ್, ಸಂಚಾಲಕ ಸಂಜೀವಕುಮಾರ ಕಾನಾಪೂರ, ಚಿಂಚೋಳಿ ತಾಲೂಕ ಅಧ್ಯಕ್ಷ ಮಹಬೂಬ್ ಅಲಿ, ಕಲಬುರ್ಗಿ ನಗರ ಅಧ್ಯಕ್ಷೆ ಸುಹಾಸಿನಿ, ಮುಖಂಡ ಅರವಿಂದ ನಾಟಿಕಾರ, ಜಗದೇವಿ ಹೆಗಡೆ, ತಬರೇಜ್, ಅಝರ್, ಆದಿಲ್, ಸುರೇಶ, ಪ್ರಕಾಶ್ ಸೇರಿದಂತೆ ಇತರರು ಇದ್ದರು.