ಪ್ರತಿಭಾ ಪುರಸ್ಕಾರ ಹಾಗೂ ನೌಕರರ ಸಮಾವೇಶ: ಸಂಗೀತಾ ಬುಕ್ಕಾ, ಅಲ್ಕಾ ಸನ್ಮಾನ

ಪ್ರತಿಭಾ ಪುರಸ್ಕಾರ ಹಾಗೂ ನೌಕರರ ಸಮಾವೇಶ: ಸಂಗೀತಾ ಬುಕ್ಕಾ, ಅಲ್ಕಾ ಸನ್ಮಾನ

ಪ್ರತಿಭಾ ಪುರಸ್ಕಾರ ಹಾಗೂ ನೌಕರರ ಸಮಾವೇಶ: ಸಂಗೀತಾ ಬುಕ್ಕಾ, ಅಲ್ಕಾ ಸನ್ಮಾನ

ಕಲಬುರಗಿ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸೋಸೈಟಿಯ ಕರ್ನಾಟಕ ರಾಜ್ಯ ಕ್ರೈಸ್ ಪ್ರಾಂಶುಪಾಲರ ಸಂಘ ಹಾಗೂ ವಸತಿ ಶಾಲಾ ನೌಕರರ ಸಂಘದ ಜಿಲ್ಲಾ ಘಟಕಗಳ ಸಂಯುಕ್ತಾಶ್ರಯದಲ್ಲಿ 2026–27ನೇ ಸಾಲಿನ ಪ್ರತಿಭಾ ಪುರಸ್ಕಾರ ಹಾಗೂ ವಸತಿ ಶಾಲಾ ಶಿಕ್ಷಕರ ಶೈಕ್ಷಣಿಕ ಸಮಾವೇಶವನ್ನು ಆಯೋಜಿಸಲಾಗಿತ್ತು.

ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯ ಹಿಂದೆ ವಸತಿ ಶಾಲೆಗಳ ನೌಕರರ ಕಠಿಣ ಪರಿಶ್ರಮ, ಸಮರ್ಪಣೆ ಹಾಗೂ ತ್ಯಾಗ ಅಡಗಿದೆ. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಪವಿತ್ರ ಕಾರ್ಯದಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ನೌಕರರನ್ನು ಗುರುತಿಸಿ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಗುಂಡಗುರ್ತಿ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಶುಶ್ರೂಷಕ ಅಧಿಕಾರಿಯಾಗಿ ಉತ್ತಮ ಸೇವೆ ಸಲ್ಲಿಸುತ್ತಿರುವ ಕು. ಸಂಗೀತಾ ಭೀಮಶಾ ಬುಕ್ಕಾ ಕುರಿಕೋಟಾ ಹಾಗೂ ಇದೇ ವಸತಿ ಶಾಲೆಯಲ್ಲಿ ಹಿಂದಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಅಲ್ಕಾ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಹಾಗೂ ವಸತಿ ಶಾಲೆಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವಲ್ಲಿ ಶಿಕ್ಷಕರು ಮತ್ತು ನೌಕರರ ಸೇವೆ ಮಹತ್ವದ್ದಾಗಿದೆ ಎಂದು ಕಾರ್ಯಕ್ರಮದಲ್ಲಿ ಅಭಿಪ್ರಾಯ ವ್ಯಕ್ತವಾಯಿತು.