ಗಿರಿ ಲೇಔಟ್‌ನಲ್ಲಿ ₹35 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ
ಗಿರಿ ಲೇಔಟ್‌ನಲ್ಲಿ ₹35 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ
ಕಲಬುರಗಿ: ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರದ ವಾರ್ಡ್ ನಂ. 55ರ ಗಿರಿ ಲೇಔಟ್ ನಗರದಲ್ಲಿ 2024–25ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB) ಯೋಜನೆಯಡಿ ₹35 ಲಕ್ಷ ವೆಚ್ಚದಲ್ಲಿ ಕೈಗೊಳ್ಳಲಿರುವ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಅಲ್ಲಮಪ್ರಭು ಪಾಟೀಲ್ ಅವರು ಗುದ್ದಲಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಅಲ್ಲಮಪ್ರಭು ಪಾಟೀಲ್, ಬಡಾವಣೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದ್ದು, ಉತ್ತಮ ರಸ್ತೆ, ಚರಂಡಿ ಸೇರಿದಂತೆ ಅಗತ್ಯ ನಾಗರಿಕ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಗಿರಿ ಲೇಔಟ್‌ನ ನಿವಾಸಿಗಳ ಬಹುದಿನಗಳ ಬೇಡಿಕೆಯಂತೆ ಸಿಸಿ ರಸ್ತೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ಗುಣಮಟ್ಟದ ಕಾಮಗಾರಿ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಸ್ಥಳೀಯರ ಸಹಕಾರದೊಂದಿಗೆ ಕ್ಷೇತ್ರದ ವಿವಿಧ ಬಡಾವಣೆಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಹಂತ ಹಂತವಾಗಿ ಕೈಗೊಳ್ಳಲಾಗುತ್ತಿದೆ. ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಒತ್ತು ನೀಡಲಾಗುವುದು ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಆದಪ್ಪ ಬಗಲಿ, ಎಸ್.ಎಸ್. ಮೈನಾಳ್, ಉಮೇಶ್ ಸಾಹು, ಮಹೇಶ ಹೊಸೂರಕರ, ರವೀಂದ್ರ ವಿಭೂತಿ, ಸಿದ್ದಲಿಂಗ ಅನ್ವರ್, ಲಕ್ಷ್ಮಿಕಾಂತ್ ಪಾಟೀಲ್, ಡಾ. ಸವಿತಾ ಸೇರಿದಂತೆ ಬಡಾವಣೆಯ ಮುಖಂಡರು, ಹಿರಿಯರು ಹಾಗೂ ಮಹಿಳೆಯರು ಉಪಸ್ಥಿತರಿದ್ದರು.

