ಭಕ್ತಿಭಾವದಿಂದ ಜರುಗಿದ ಶ್ರೀ ವೀರಭದ್ರೇಶ್ವರ ರಥೋತ್ಸವ
ನರೇಗಲ್ಲ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವ
ಭಕ್ತಿಭಾವದಿಂದ ಜರುಗಿದ ಶ್ರೀ ವೀರಭದ್ರೇಶ್ವರ ರಥೋತ್ಸವ
ನರೇಗಲ್ಲ: ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ಪಟ್ಟಣದಲ್ಲಿ ಭಕ್ತಿಭಾವದಿಂದ ರಥೋತ್ಸವ ನೆರವೇರಿತು.
ನರೇಗಲ್ಲ ಹಿರೇಮಠದ ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳು ಹಾಗೂ ಹಾಲಕೆರೆ ಸಂಸ್ಥಾನಮಠದ ಶ್ರೀ ಮುಪ್ಪಿನ ಬಸವಲಿಂಗ ಸ್ವಾಮಿಗಳು ರಥೋತ್ಸವಕ್ಕೆ ಚಾಲನೆ ನೀಡಿದರು.
ರಥೋತ್ಸವದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಶ್ರೀ ವೀರಭದ್ರೇಶ್ವರ ಸ್ವಾಮಿಯ ದರ್ಶನ ಪಡೆದು ಭಕ್ತಿ ಸಮರ್ಪಿಸಿದರು. ರಥವು ಪ್ರಮುಖ ಬೀದಿಗಳಲ್ಲಿ ಸಂಚರಿಸುತ್ತಿದ್ದಂತೆ ಭಕ್ತರು ತೇರಿಗೆ ಉತ್ತತ್ತಿ ಹಾಗೂ ಬಾಳೆಹಣ್ಣು ಎಸೆದು ತಮ್ಮ ಹರಕೆ ಹಾಗೂ ಭಕ್ತಿಯನ್ನು ಅರ್ಪಿಸಿದರು.
ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ನರೇಗಲ್ಲ ಪಟ್ಟಣದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ವಿವಿಧೆಡೆಯಿಂದ ಆಗಮಿಸಿದ್ದ ಭಕ್ತರು ರಥೋತ್ಸವದಲ್ಲಿ ಭಾಗವಹಿಸಿ ಧನ್ಯತೆ ಮೆರೆದರು.

